ಕುಡಿಯುವ ನೀರಿಗಾಗಿ ದೊಡ್ಡತುಮಕೂರು ಮಜರಾ ಹೊಸಹಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆಯ ವತಿಯಿಂದ ಕನ್ನಡ ಪರ ,ರೈತಪರ, ಪ್ರಗತಿ ಪರ ಸಂಘಟನೆಗಳ ಸಹಕಾರದೊಂದಿಗೆ ಶುದ್ಧ ಕುಡಿಯುವ ನೀರು ನೀಡುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮಗಳ ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು ಹಾಗೂ ಗ್ರಾಮಗಳ ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕೆಂದು ಆಗ್ರಹಿಸಿದರು

ರೈತ ಮುಖಂಡರು ಗ್ರಾಮಸ್ಥರು ಆದ ಸತೀಶ್ ಮಾತನಾಡಿ ಶುದ್ಧ ಕುಡಿಯುವ ನೀರನ್ನು ಕೊಡದಿದ್ದಲ್ಲಿ ಹೋರಾಟ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ತಾತ್ಕಾಲಿಕ ಪರಿಹಾರಕ್ಕೆ ಅವಕಾಶವಿಲ್ಲ ನಮಗೆ ಶಾಶ್ವತ ಪರಿಹಾರ ಬೇಕು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸಿಗುವಂತಾಗಬೇಕು ಇದು ನಮ್ಮೆಲ್ಲರ ಮುಖ್ಯ ಉದ್ದೇಶ ಎಂದು ತಿಳಿಸಿದರು

ಸತ್ಯಾಗ್ರಹ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕನ್ನಡ ಪರ ಹೋರಾಟಗಾರರು ರೈತ ಮುಖಂಡರು ಪ್ರಗತಿಪರ ಚಿಂತಕರು ಹಾಗೂ ದೊಡ್ಡ ತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು …