KUWJ, 38,ನೇ ರಾಜ್ಯಸಮ್ಮೇಳನದ ಪೂರ್ವ ಸಿದ್ಧತಾ ಸಭೆಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ರವರಿಂದ ಚಾಲನೆ
ದಾವಣಗೆರೆ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 38ನೇ ಸಮ್ಮೇಳನ ಈ ಬಾರಿ ನಮ್ಮ ದಾವಣಗೆರೆ ಜಿಲ್ಲೆಗೆ ಸುಮಾರು 30 ವರ್ಷಗಳ ನಂತರ ಸಿಕ್ಕಿರುವುದು ನಮ್ಮೆಲ್ಲರ ಅದೃಷ್ಟವೆಂದರೆ ತಪ್ಪಾಗಲಾರದು.
ಈ ವರ್ಷದ ಅಂತ್ಯದೊಳಗೆ ನಾವು ಸಮ್ಮೇಳನವನ್ನು ಅದ್ದೂರಿಯಾಗಿ ಹಾಗೂ ಬಹಳ ಯಶಸ್ವಿಯಾಗಿ ನೆರವೇರಿಸಬೇಕಿದೆ.
ರಾಜ್ಯ ಸಮ್ಮೇಳನದ ಪೂರ್ವಭಾವಿ ಸಿದ್ಧತೆಗೆ ದಿನಾಂಕ : 27.8.2023 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಹೋಟೆಲ್ ಅಪೂರ್ವ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಇ.ಎಂ.ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕೃತ ಚಾಲನೆ ನೀಡಲಾಗುವುದು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪೂರ್ವಭಾವಿ ಸಿದ್ಧತೆಯ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಶ್ರೀ ಕೆ.ವಿ. ಪ್ರಭಾಕರ್ ಅವರು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಶಿವಾನಂದ ತಗಡೂರುರವರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಜಿ.ಸಿ. ಲೋಕೇಶ್ ರವರು, ರಾಷ್ಟ್ರೀಯ ಸಮಿತಿ ಸದಸ್ಯರಾದ ಶ್ರೀ ಎಸ್.ಕೆ.ಒಡೆಯರ್ ರವರು, ರಾಜ್ಯ ಸಮಿತಿ ಸದಸ್ಯರಾದ ಶ್ರೀ ಕೆ.ಚಂದ್ರಣ್ಣಾವರುಗಳು ಉಪಸ್ಥಿತರಿರುತ್ತಾರೆ. ಈ ಕಾರ್ಯಕ್ರಮಕ್ಕೆ ಕಾರ್ಯಕಾರಿ ಸಮಿತಿ ಸದಸ್ಯರುಗಳು, ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲೆಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರು ಸರಿಯಾದ ಸಮಯಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್ ರವರು ವಿನಂತಿಸಿದ್ದಾರೆ.