ವಿಎಸ್‌ಎಸ್‌ಎನ್ ನೂತನ ಅಧ್ಯಕ್ಷರಾಗಿ ಜಗನ್ನಾಥ್, ಉಪಾಧ್ಯಕ್ಷರಾಗಿ ನರಸಮ್ಮ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್ ಎಸ್ ಘಾಟಿ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತ ದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ, ಸಂಘದ ಕಚೇರಿಯಲ್ಲಿ ಇಂದು ಬೆಳಿಗ್ಗೆ ನಡೆಯಿತು.

ಆಡಳಿತ ಮಂಡಳಿಯ 11 ನಿರ್ದೇಶಕರ ಪೈಕಿ, ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಗನ್ನಾಥ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನರಸಮ್ಮ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿಯಾದ ಭಾಸ್ಕರ್ ಟಿ ಅವರು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆ ಆಗಿರುವುದರಿಂದ ಸಲ್ಲಿಸಿರುವ ನಾಮಪತ್ರವನ್ನು ಅಂಗೀಕರಿಸಲಾಗಿದೆ, ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ್ ಮತ್ತು ಉಪಾಧ್ಯಕ್ಷರಾಗಿ ನರಸಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜುಂಜಪ್ಪ. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಅಪ್ಪಯಣ್ಣ, ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮದ ಮುಖಂಡರುಗಳು ಹೂಮಾಲೆ ಹಾಕಿ ಸಿಹಿ ತಿನ್ನಿಸಿ ಅಭಿನಂದಿಸಿರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷರಾದ ಜಗನ್ನಾಥ್ ಅವರು ನಾನು ಮೂರನೇ ಬಾರಿಗೆ ಸಂಘದ ಅಧ್ಯಕ್ಷನಾಗಿ ಆಯ್ಕೆಯಾಗುತ್ತಿದ್ದೇನೆ, ಇದಕ್ಕೆ ಸಹಕರಿಸಿದ ಎಲ್ಲಾ ನಿರ್ದೇಶಕರುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಎಲ್ಲಾ ನಿರ್ದೇಶಕರ ಸಹಕಾರ ಪಡೆದು ನೆನೆಗುದಿಗೆ ಬಿದ್ದಿರುವ ನೂತನ ಕಟ್ಟಡವನ್ನು ಒಂದು ವಾರದೊಳಗೆ ಭೂಮಿ ಪೂಜೆ ಮಾಡಿ, ಒಂದು ವರ್ಷದೊಳಗೆ ಕಟ್ಟಡ ಪೂರ್ಣಗೊಳಿಸುವ ಯೋಜನೆ ರೂಪಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಗೌರೀಶ್, ಗುಂಜೂರು ಕುಮಾರ್, ಶಿವಣ್ಣ, ಮೈಲಾರಪ್ಪ, ಮಂಜುನಾಥ್ ಎಸ್ ಬಿ, ನಿರ್ದೇಶಕರಾದ ಮಂಜುನಾಥ್, ನಾಗನಾಯಕ್, ಚಿಕ್ಕಣ್ಣ ಸೇರಿದಂತೆ ಎಲ್ಲಾ ನಿರ್ದೇಶಕರು, ಯುವ ಮುಖಂಡರಾದ ಮಧು, ಮುರುಳಿ, ಉದಯ್ ಆರಾಧ್ಯ, ವಕೀಲರಾದ ಸಂತೋಷ್ ಮತ್ತಿತರರು ಅಭಿನಂದನೆ ಸಲ್ಲಿಸಿದರು.