ಶೀಘ್ರದಲ್ಲೇ ವಿಪಕ್ಷ ನಾಯಕನನ್ನು ಆಯ್ಕೆ – ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

ಬೆಂಗಳೂರು: ವಿಧಾನಸಭಾ ಚುನಾವಣೆ ನಡೆದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ, ವಿಧಾನಮಂಡಲದ ಮೊದಲ ಅಧಿವೇಶನ ನಡೆದರೂ, ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಮಾತ್ರ ಮಾಡಲಾಗಿಲ್ಲ. ಈ ನಡುವೆ ವಿಪಕ್ಷ ನಾಯಕನ ಆಯ್ಕೆ ಮಾತ್ರ ಬಿಜೆಪಿಯಿಂದ ಆಗಿರಲಿಲ್ಲ.

ಆದರೆ ಶೀಘ್ರದಲ್ಲೇ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಪಕ್ಷ ನಾಯಕರು ಇಲ್ಲ ಅಂತ ನಾವು ಕೆಲಸ ಮಾಡ್ತಿಲ್ಲ. ಶೀಘ್ರವೇ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ ಎಂಬುದಾಗಿ ಹೇಳಿದರು.

ಶೀಘ್ರವೇ ಬಿಜೆಪಿಯಿಂದ ರಾಜ್ಯಾಧ್ಯಂತ ಪ್ರವಾಸ ಪ್ರಾರಂಭಿಸಲಾಗುತ್ತದೆ. ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 22 ರಿಂದ 23 ಸ್ಥಾನವನ್ನು ಗೆಲ್ಲೋದಾಗಿ ವಿಶ್ವಾಸ ವ್ಯಕ್ತ ಪಡಿಸಿದರು.

ಅಂದಹಾಗೇ ವಿಪಕ್ಷ ಸ್ಥಾನದಲ್ಲಿರುವಂತ ಬಿಜೆಪಿಯಿಂದ ಈವರೆಗೆ ವಿಪಕ್ಷ ನಾಯಕನ ಆಯ್ಕೆ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ಬಿಜೆಪಿಯಿಂದ ವಿಪಕ್ಷ ನಾಯಕನ ಸ್ಥಾನ ಆಯ್ಕೆ ಮಾಡದೇ, ಕಾಂಗ್ರೆಸ್ ಪಕ್ಷದ ಆಡಳಿತದ ಬಗ್ಗೆ ಟೀಕಿಸೋ ಯಾವುದೇ ನೈತಿಕ ಹಕ್ಕು ಇಲ್ಲ ಎಂಬುದಾಗಿ ಕಾಂಗ್ರೆಸ್ ನಾಯಕರುಗಳು ಕಿಡಿಕಾರಿದ್ದರು.