ಬೆಂಗಳೂರು: ಮನೆ ಬಾಗಿಲಿಗೆ ಉಚಿತ ಔಷಧಿ ಹಾಗೂ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದ್ದು, ಈ ಮೂಲಕ ರಾಜ್ಯದ ಜನತೆಗೆ ಸರ್ಕಾರಿ ಯೋಜನೆಗಳು ಇನ್ನೂ ಹತ್ತಿರವಾಗುವುದಕ್ಕೆ ಎಲ್ಲಾ ರೀತಿಯಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗೃಹ ಆರೋಗ್ಯ ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದ್ದು, ಈಗಾಗಲೇ ಯೋಜನೆಗೆ ಸಂಬಂಧಪಟ್ಟಂತೆ ಸ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಕ್ಯಾಬಿನೆಟ್ ಅಲ್ಲಿ ಒಪ್ಪಿಗೆ ಸಿಕ್ಕರೆ ಇದು ಶೀಘ್ರದಲ್ಲಿ ಜಾರಿಗೆ ಬರಲಿದೆಯಂತೆ.

ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡಲು ಗೃಹ ಆರೋಗ್ಯ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಮುಂದಾಗಿದೆ. ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲು ಈ ಯೋಜನೆಯಲ್ಲಿ ಉದ್ದೇಶಿಸಲಾಗಿದೆ.

ಆರಂಭದಲ್ಲಿಯೇ ಖಾಯಿಲೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ಬಡ ಜನರ ಸಾವಿನ ಪ್ರಮಾಣ ಕಡಿಮೆ ಮಾಡಿ ಉತ್ತಮ ಆರೋಗ್ಯ ನೀಡುವುದು ಕೂಡ ಈ ಯೋಜನೆಯಲ್ಲಿ ಇದ್ದು, ಈ ಹಿನ್ನೆಲೆ ಸರ್ಕಾರ ಪ್ರತ್ಯೇಕ ಸಿಬ್ಬಂದಿ ನೇಮಕಾತಿ ವೈದ್ಯರ ನೇಮಕಾತಿಗೆ ಕೂಡ ಇಲಾಖೆ ಮುಂದಾಗಿದೆಯಂತೆ.