ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವಿನ ನಂತರ ಜನಪ್ರಿಯ ಶಾಸಕರಾದ ಎಆರ್ ಕೃಷ್ಣಮೂರ್ತಿರವರು ಇಂದು ಯಳಂದೂರು ತಾಲೂಕಿನ ಅಂಬೇಡ್ಕರ್ ಸಮುದಾಯ ಭವನದಲ್ಲಿ ಚುನಾಯಿತ ಗ್ರಾಮ ಪಂಚಾಯಿತಿ ಸದಸ್ಯರುಗಳು ಅಧ್ಯಕ್ಷರು ಉಪಾಧ್ಯಕ್ಷರು ಪಕ್ಷದ ಕಾಂಗ್ರೆಸ್ ಪಕ್ಷದ ಪ್ರಜಾ ಕಮಿಟಿ ಅಧ್ಯಕ್ಷರು ಹಾಗೂ ವಿವಿಧ ಸೊಸೈಟಿಗಳ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳಿಗೆ ಅಭಿನಂದನಾ ಸಮಾರಂಭವನ್ನು ಯಶಸ್ವಿಯಾಗಿ ಯಳಂದೂರುಮತ್ತು ಕೊಳ್ಳೇಗಾಲ ಬ್ಲಾಕಿನ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಯಿತು. ಈ ಸಮಾರಂಭದಲ್ಲಿ ಮಾಜಿ ಶಾಸಕರಾದ ಎಸ್ ಜಯಣ್ಣ . ಮಾಜಿ ಶಾಸಕ ಜಿ ಎನ್ ನಂಜುಂಡಸ್ವಾಮಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರುಗಳಿಗೆ ಸನ್ಮಾನವನ್ನು ನೆರವೇರಿಸಿ ಮಾತನಾಡಿದ ಶಾಸಕರು ಈ ಬಾರಿ ನನಗೆ ತಮ್ಮ ಸೇವೆಯನ್ನು ಮಾಡಲು ಹಗಲು ಇರುಳು ಶ್ರಮಿಸಿದ ನನ್ನ ಎಲ್ಲಾ ಕಾರ್ಯಕರ್ತ ಬಂಧುಗಳಿಗೂ ನನ್ನ ಪ್ರೀತಿಯ ನಮಸ್ಕಾರಗಳು ಎಂದು ತಿಳಿಸಿದರು ಈ ಸನ್ಮಾನ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮುಖಂಡರುಗಳು ಹಾಜರಿದ್ದರು.

‌ವರದಿ ಆರ್ ಉಮೇಶ್