ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ.
ಯಳಂದೂರು ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾನ್ಯ ಶಾಸಕರಾದ ಎ ಆರ್ ಕೃಷ್ಣಮೂರ್ತಿ ರವರು.
ತಾಲ್ಲೂಕು ಕಛೇರಿ ಆವರಣದಲ್ಲಿ ಬೆಳ್ಳಿ ರಥದಲ್ಲಿ ವಾಲ್ಮೀಕಿ ಪೋಟೋ ಇರಿಸಿ ಪೊಜೆ ಸಲ್ಲಿಸಿದ ನಂತರ ಕಲಾತಂಡಗಳಾದ ಗೊರುಕಾನ ಕುಣಿತ ಡೊಳ್ಳು ಕುಣಿತ ನಗಾರಿ ವಾದ್ಯಗಳ ಮೂಲಕ ಮೆರವಣಿಗೆ ಹೊರಟು ಎಸ್.ಬಿ ಸರ್ಕಲ್ ಬಳೇಮಂಟಪ ಮಾರಮ್ಮನ ದೇವಸ್ಥಾನ ಬಳೆಪೆಟೇ ಸರ್ಕಲ್ ಮುಖಾಂತರ ಸಾಗಿ ನಂತರ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು ಎಂದು ಮಾಹಿತಿ ತಿಳಿಸಿದರು ಈ ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮುದಾಯದ ಎಸ್ ಎಸ್ ಎಲ್ ಸಿ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ವೇದಿಕೆ ಕಾರ್ಯಕ್ರಮ ಮುಗಿದು ನಂತರ ಸಂಜೆ ವೇಳೆಗೆ ರಸಮಂಜರಿ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು ಈ ಸಂದರ್ಭದಲ್ಲಿ ವಾಲ್ಮೀಕಿ ಮಹರ್ಷಿ ಸಂಘದ ತಾಲ್ಲೂಕು ಅಧ್ಯಕ್ಷ ಮುರಳಿ ತಹಸಿಲ್ದಾರ್ ಜಯಪ್ರಕಾಶ್ ಬಿ ಓ ಕಾಂತರಾಜು ಪಟ್ಟಣ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಮಹೇಶ್ ಕುಮಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ