ಗೌಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಂಬೇಡ್ಕರ್ ರವರ ಪರಿನಿರ್ವಾಣ ದಿನ
ಯಳಂದೂರು:ತಾಲ್ಲೂಕಿನ ಗೌಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಪರಿನಿರ್ವಾಣ ದಿನವನ್ನು ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೇಣದ ಬತ್ತಿ ಹಚ್ಚಿ ಮೌನ ನಮನ ಸಲ್ಲಿಸಿದರು ನಂತರ ಅಂಬೇಡ್ಕರ್ ರವರ ಕುರಿತು ಗ್ರಾಮ ಪಂಚಾಯಿತಿ ಸದಸ್ಯ ಚಿನ್ನಸ್ವಾಮಿ ಮಾತನಾಡಿ ಎಲ್ಲರೂ ಅಂಬೇಡ್ಕರ್ ರವರ ತತ್ವ ಆದರ್ಶ ಸಿದ್ಧಾಂತಗಳನ್ನು ಎಲ್ಲಾ ಬಹುಜನರು ಮೈಗೂಡಿಸಿಕೊಂಡು ಮುಂದೆ ಸಾಗಬೇಕು ಎಂದು ಹೇಳಿದರು ಈ ಸಂದರ್ಭದಲ್ಲಿ ಗ್ರಾಮ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ರಾಜೇಶ್ ಸದಸ್ಯರಾದ ಚಂದ್ರಶೇಖರ್. ಉಮೇಶ್.ಸುಂದರ್. ನಾಗೇಂದ್ರ ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ