ದೊಡ್ಡಬಳ್ಳಾಪುರ:ಕನ್ನಡ ನಾಮಫಲಕ ವಿಚಾರದಲ್ಲಿ ಶಾಂತಿಯುತ ಹೋರಾಟ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಹಾಗೂ ಹಲವಾರು ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ ತಾಲೂಕು ರಕ್ಷಣಾ ವೇದಿಕೆ ಸದಸ್ಯರು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ದೊಡ್ಡಬಳ್ಳಾಪುರ ತಾಲೂಕು ರಕ್ಷಣಾ ವೇದಿಕೆ ಅಧ್ಯಕ್ಷ ಪುರುಷೋತ್ತಮ್ ಮಾತನಾಡಿ, ರಾಜ್ಯದಧ್ಯಂತ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಕಡೆಗಣಿಸಿರುವುದರ ವಿರುದ್ಧ ಜನ ಜಾಗೃತಿ ಪ್ರತಿಭಟನೆ ನಡೆಸಿದ್ದರು. ಆದರೆ ಹೋರಾಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿಯುತವಾಗಿದ್ದರು ನಾರಾಯಣ ಗೌಡರನ್ನು ಸರ್ಕಾರ ಬಂಧಿಸಿದೆ. ಇದು ಕಂಡನೀಯ. ಸಿದ್ದರಾಮಯ್ಯ ಸರ್ಕಾರ ಸುಖಾ ಸುಮ್ಮನೆ ರಕ್ಷಣಾ ವೇದಿಕೆ ಹೋರಾಟಗಾರರ ಮೇಲೆ ಬಂಧಿಸುವುದರ ಮೂಲಕ ಗದ ಪ್ರಹಾರ ಮಾಡಿದೆ. ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡವಿರಬೇಕು. ಎಂಬ ಸರ್ಕಾರದ ಆದೇಶವನ್ನು ವಲಸಿಗ ವಾಣಿಜ್ಯೋದ್ಯಮಿಗಳು ಕಡೆಗಣಿಸಿ ವ್ಯಾಪಾರ ಮಳಿಗೆಗಳ ನಾಮಫಲಕಗಳಲ್ಲಿ ಆಂಗ್ಲ ಭಾಷೆಯನ್ನು ಬಳಸಿದ್ದಾರೆ. ಇದನ್ನು ರಕ್ಷಣಾ ವೇದಿಕೆ ಖಂಡಿಸಿ ನಾಮ ಫಲಕಗಳಲ್ಲಿ ಕನ್ನಡ ಕಡ್ಡಾಯ ಇರಬೇಕೆಂದು ಹೋರಾಟ ನಡೆಸುತ್ತಿದೆ. ಆದರೆ ವಲಸಿಗರಿಗೆ ಅವರ ಬೆಂಬಲಕ್ಕೆ ಸರ್ಕಾರ ನಿಂತಿರುವುದು ರಕ್ಷಣಾ ವೇದಿಕೆ ಸಹಿಸುವುದಿಲ್ಲ. ಕನ್ನಡ ಭಾಷೆಯನ್ನು ಯಾರೇ ಕಡೆಗಣಿಸಿದರು ಅದನ್ನು ನಾವು ಉಗ್ರವಾಗಿ ಕಂಡಿಸುತ್ತೇವೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಈ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಈ ಕೂಡಲೇ ಸರ್ಕಾರ ನಾರಾಯಣ ಗೌಡರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯವ್ಯಾಪಿ ತೀವ್ರತರ ಹೋರಾಟವನ್ನು ಮಾಡಲಿದೆ ಎಂದು ಪುರುಷೋತ್ತಮ್ ಹೇಳಿದರು.