ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲ್ಲೂಕು,ತೂಬಗೆರೆ, ಹೋಬಳಿ ಹೆಗ್ಗಡಹಳ್ಳಿ ಗ್ರಾಮ ಪಂಚಾಯಿತಿ ಗೂಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಶಾಲಾ ಕಟ್ಟಡ ಹಾಗೂ ಹೆಗ್ಗಡಹಳ್ಳಿ ಪಂಚಾಯಿತಿಯ ಘನತ್ಯಾಜ್ಯ ವಿಲೇವಾರಿ ಘಟಕವನ್ನು. ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಉದ್ಘಾಟಿಸಿದರು.
ನಂತರ ಮಾತನಾಡಿ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದು ಇಲ್ಲಿನ ಅಭಿವೃದ್ದಿ ಕಾರ್ಯಗಳು ಕುಂಠಿತ ವಾಗಿರುವುದು ನಮ್ಮ ಗಮನಕ್ಕೆ ಬಂದಿದೆ ಇಲ್ಲಿ ಮೂಲಭೂತ ಸೌಲಭ್ಯಗಳಿಗೆ ಅದ್ಯತೆ ನೀಡಿ ಕುಡಿಯುವ ನೀರು ಶೌಚಾಲಯ ರಸ್ತೆ ಚರಂಡಿಗಳು ಅಭಿವೃದ್ದಿಗೆ ಅದ್ಯತೆ ನೀಡಲಾಗುವುದು ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ಪಡಿತರಿಗೆ ನೀಡುವ ಅಕ್ಕಿ ಬದಲು ಹಣ ಅವರ ಖಾತೆಗೆ ಜಮೆ ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಪಡಿತರಿಗೆ ನೀಡಲಾಗುತ್ತಿರುವ ಹಣ ಬದಲು ಅಕ್ಕಿಯನ್ನು ನೀಡಲು ಸರ್ಕಾರ ಚಿಂತನೆ ಮಾಡಲಾಗುತ್ತಿದ್ದು ಅದಷ್ಠು ಬೇಗ ಪಡಿತರಿಗೆ ಅಕ್ಕಿಯನ್ನು ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಂಗಪ್ಪ
ಕಾರ್ಯದರ್ಶಿ ರವಿ ಸಿದ್ದಪ್ಪ ತಹಶೀಲ್ದಾರ್ ಶ್ರೀ ವಿದ್ಯಾ ವಿಭಾ ರಾಥೋಡ್
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಅಂಜಿನಮ್ಮ
ಉಪಾಧ್ಯಕ್ಷ ಜಗನ್ ನಾಥ್ ಹೆಗ್ಗಡಹಳ್ಳಿ ಗ್ರಾಮ ಪಂಚಾಯಿತಿಯ ಸದಸ್ಯರು ಸಾರ್ವಜನಿಕರು ಭಾಗವಹಿಸಿದ್ದರು.