ಘಾಟಿ ಸುಬ್ರಮಣ್ಯ ಸ್ವಾಮಿ ಬ್ರಹ್ಮ ರಥೋತ್ಸವ ಸಂಪನ್ನ.
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣ ಸಮ್ಮುಖದಲ್ಲಿ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ಬಹಳ ವೈಭವದೊಂದಿಗೆ ನೆರವೇರಿತು.
ರಥೋತ್ಸವಕ್ಕೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಭಕ್ತಗಣ ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದು, ರಥವನ್ನ ಎಳೆದು, ರಥಕ್ಕೆ ಬಾಳೆಹಣ್ಣು, ದವನ ಎಸೆದು ತಮ್ಮ ಭಕ್ತಿ ಇಚ್ಚಾನುಸಾರ ಸಮರ್ಪಿಸಿ ಪುನೀತರಾದರು.
ಷಷ್ಠಿಯ ದಿನದಂದು ಮುಂಜಾನೆ 3ರಿಂದ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಆರಂಭವಾಗಲಿವೆ. ಅಭಿಷೇಕ ಕಾರ್ಯಗಳು ಪ್ರಾರಂಭಗೊಂಡು,5:30ಕ್ಕೆ ಮಹಾ ಮಂಗಳಾರತಿ ನೆರವೇರಿತು. ಗರ್ಭಗುಡಿಯಲ್ಲಿನ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಲಕ್ಷ್ಮೀನರಸಿಂಹ ಸ್ವಾಮಿ ಮೂರ್ತಿಗಳಿಗೆ ಪ್ರಾತಃ ಕಾಲದಲ್ಲಿ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಶ್ರೀಗಂದಾಭಿಷೇಕ, ಭಸ್ಮದ ಭಿಷೇಕದೊಂದಿಗೆ ಹೂವಿನ ಅಲಂಕಾರ ನೆರವೇರಿಸಲಾಯಿತು. ರಾತ್ರಿ 8:30ರವರೆಗೂ ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗಿತ್ತು.
ಭಕ್ತರಿಗೆ ಅನ್ನ ದಾಸೋಹ, ಮಜ್ಜಿಗೆ, ಪಾನಕದ ಅರವಂಟಿಗೆ ವ್ಯವಸ್ಥೆ ಮಾಡಲಾಗಿತ್ತು.ಜಾತ್ರೆಗೆ ಆಗಮಿಸುವ ಭಕ್ತರಿಗೆ ವಿಶೇಷ ಬಸ್‍ಗಳ ವ್ಯವಸ್ಥೆ ಕಲ್ಪಿಸಲಾಗಿತ್ತು.
ಬ್ರಹ್ಮರಥೋತ್ಸವಕ್ಕೆ ಬರುವ ಸಹಸ್ರಾರು ಭಕ್ತಾಧಿಗಳಿಗೆ ಮೊಬೈಲ್ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಶುಧ್ಧ ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ವ್ಯವಸ್ಥೆ. ಚಿನ್ನಾಭರಣ ಕಳವು ಸೇರಿದಂತೆ ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದ್ರೋಣ್ ಕ್ಯಾಮೆರಾ ಮತ್ತು ದೇವಾಲಯದ ಸುತ್ತಾಮುತ್ತಾ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.
ಪಾರ್ಕಿಂಗ್ ವ್ಯವಸ್ಥೆ:ಸಂಚಾರ ದಟ್ಟಣೆ ನಿಯಂತ್ರಿಸಲು ದೇವಾಲಯದಿಂದ ಒಂದು ಕಿ.ಮೀ ಅಂತರದಲ್ಲೇ 14 ಕಡೆ ಬೈಕ್, ಕಾರು, ಬಸ್ ಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಪೊಲೀಸ್ ಭದ್ರತೆ:ಘಾಟಿ ಬ್ರಹ್ಮರಥೋತ್ಸವ ದಲ್ಲಿ ಯಾವುದೇ ಅಹಿತಕರ ಘಟನೆ ನಡೆಯ ದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು, ಅಗತ್ಯವಿರುವ ಕಡೆ ಬ್ಯಾರಿಕೇಡ್ ವ್ಯವಸ್ಥೆ ಸಹಾ ವ್ಯವಸ್ಥೆ ಮಾಡಲಾಗಿತ್ತು.
ಜಾತ್ರಾ ಮಹೋತ್ಸವದ ಪ್ರಯುಕ್ತ ಕೆಎಸ್ ಆರ್ಟಿಸಿ ವತಿಯಿಂದ ಘಾಟಿಯಿಂದ ದೊಡ್ಡ ಬಳ್ಳಾಪುರ,ಬೆಂಗಳೂರು,ಚಿಕ್ಕಬಳ್ಳಾಪುರ, ಗೌರಿಬಿದನೂರು,ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು.ಅದೇರೀತಿ ‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳಾ ಪ್ರಯಾಣಿಕರು ಉಚಿತ ವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಅವಕಾಶವನ್ನ ಸಹ ಕಲ್ಪಿಸಲಾಗಿತ್ತು.