ನಾಳೆ ಕರ್ನಾಟಕ ಪಬ್ಲಿಕ್ ಶಾಲೆ ನಡೆಸುತ್ತಿರುವ ಮೊದಲನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ….
ವರದಿ ಆರ್ ಉಮೇಶ್ ಮಲಾರಪಾಳ್ಯ
ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ 2023/24ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ ಆರ್ ಕೃಷ್ಣಮೂರ್ತಿ ರವರು ನಾಳೆ ನಡೆಯಲಿರುವ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ದಿನಾಂಕ 03/02/2024ರ ಶನಿವಾರದಂದು ಬೆಳಿಗ್ಗೆ 09ಘಂಟೆಗೆ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಎಲ್ಲಾ ಗೌರವಾನ್ವಿತ ಪೋಷಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲರಾದ ನಂಜುಂಡಸ್ವಾಮಿ ರವರು ಹಾಗೂ ಸಿಬ್ಬಂದಿ ವರ್ಗದವರು ಮನವಿ ಮಾಡಿದರು ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಇದೆ ಮೊದಲ ಬಾರಿಗೆ ನಮ್ಮ ಯಳಂದೂರಿನ ಕರ್ನಾಟಕ ಪಬ್ಲಿಕ್ ಶಾಲೆ ನಡೆಸುತ್ತಿರುವ ವಿಶೇಷ ಸಮಾರಂಭಕ್ಕೆ ಎಲ್ಲಾ ಗೌರವಾನ್ವಿತ ಅತಿಥಿಗಳು ಪೋಷಕರು ಆಗಮಿಸಿ ಶಾಲೆಯ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸ್ಪೂರ್ತಿಯಾಗುವುದರ ಮೂಲಕ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಲು ಸರ್ವರು ಸಹಕರಿಸಬೇಕಾಗಿ ತಮ್ಮಲ್ಲಿ ಕಳಕಳಿಯ ಮನವಿ ಈ ಸಂದರ್ಭದಲ್ಲಿ ಪಬ್ಲಿಕ್ ಶಾಲೆಯ ಶಿಕ್ಷಕ ವೃಂದದವರು ಹಾಜರಿದ್ದರು.