ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ…. ದೊಡ್ಡಬಳ್ಳಾಪುರ ವಿದ್ಯಾರ್ಥಿನಿಗೆ ಮುಖ್ಯಮಂತ್ರಿಯಿಂದ ಪ್ರಶಸ್ತಿ ವಿತರಣೆ
ದೊಡ್ಡಬಳ್ಳಾಪುರ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2023 ರ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂದ ಸ್ಪರ್ದೆ ಆಯೋಜಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿಜೇತರಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಇಂದು ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಬಹುಮಾನ ವಿತರಿಸಿದರು.
ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಮೀನ.ಎಂ ಅವರು ತೃತೀಯ ಸ್ಥಾನ ಪಡೆದುಕೊಂಡಿದ್ದರು. ಇವರಿಗೆ ಮುಖ್ಯಮಂತ್ರಿಗಳು ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಗಳಾದ ಡಾ.ಕೆ.ವಿ.ತ್ರಿಲೋಕ ಚಂದ್ರ, ಆಯುಕ್ತರಾದ ಶ್ರೀ ಹೇಮಂತ್ ಎಂ.ನಿಂಬಾಳ್ಕರ್ ಮತ್ತಿತರರು ಇದ್ದರು.