ಹಾಡೋನ ಹಳ್ಳಿಯಲ್ಲಿ ಹಳ್ಳಿಕಾರ್ ತಳಿ ರಾಸುಗಳ ಸೌಂದರ್ಯ ಸ್ಪರ್ಧೆ…
ದೊಡ್ಡಬಳ್ಳಾಪುರ:ತಾಲ್ಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮದಲ್ಲಿ ಮಾರ್ಚ್ 8,/2024 ರಂದು ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಹಳ್ಳಿಕಾರ್ ಹಸುಗಳ ಸೌಂದರ್ಯ ಪ್ರದರ್ಶನ ಸ್ಪರ್ಧೆ ಆಯೋಜಿಸಲಾಗಿದೆ.
ಈ ಕುರಿತ ಸುದ್ದಿಗೋಷ್ಠಿಯಲ್ಲಿ ವೇದಿಕೆ ಅಧ್ಯಕ್ಷರಾದ ಹಳ್ಳಿ ರೈತ ಅಂಬರೀಶ್ ರವರು ಮಾತನಾಡಿ ಮಹಾ ಶಿವರಾತ್ರಿ ಅಂಗವಾಗಿ ಹಳ್ಳಿಕಾರ್ ಹಸುಗಳ ಫ್ಯಾಶನ್ ಶೋ ಪ್ರಸ್ತುತಪಡಿಸಲು ನಾವು ಉತ್ಸುಕರಾಗಿದ್ದೇವೆ. ಈ ಕಾರ್ಯಕ್ರಮದ ಮೂಲಕ ಹಳ್ಳಿಕಾರ್ ತಳಿಯ ಸೌಂದರ್ಯ ಮತ್ತು ಸಾಂಸ್ಕೃತಿಕ ಮಹತ್ವವನ್ನು ಪ್ರದರ್ಶಿಸುವ ಗುರಿ ಹೊಂದಿದ್ದೇವೆ. ಹಾಗೂ ಸ್ಥಳೀಯ ತಳಿಗಳನ್ನು ಸಂರಕ್ಷಿಸುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾಗುತ್ತಿದೆ ಎಂದರು.
ನವ ಕರ್ನಾಟಕ ಯುವಶಕ್ತಿ ವೇದಿಕೆಯ ಕಾರ್ಯದರ್ಶಿ ಉದಯ ಆರಾಧ್ಯ ಮಾತನಾಡಿ ಹಳ್ಳಿಕಾರ್ ಹಸುಗಳ ಸೌಂದರ್ಯ ಸ್ಪರ್ಧೆಯ ನಿಯಮಗಳು ಮತ್ತು ಬಹುಮಾನ ಆಯ್ಕೆ ವಿಧಾನ ಶೀಘ್ರದಲ್ಲಿ ತಿಳಿಸಲಾಗುವುದು ಎಂದರು. ಹಾಗೂ ಈ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ರೈತ ಮುಖಂಡರು ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅಪ್ಪಯ್ಯಣ್ಣ ಮಾತನಾಡಿ ನವ ಕರ್ನಾಟಕ ಯುವಶಕ್ತಿ ವೇದಿಕೆಯು ರೈತರ ಕಲ್ಯಾಣಕ್ಕಾಗಿ ಮತ್ತು ಕನ್ನಡ ಭಾಷೆ-ಸಂಸ್ಕೃತಿಯಯನ್ನು ಉತ್ತೇಜಿಸಲು ಶ್ರಮಿಸುತ್ತಿರುವ ಯುವ ಸಂಘಟನೆಯಾಗಿದೆ. ವಿವಿಧ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಯುವಕರು ತೊಡಗಿಕೊಳ್ಳಲು ಉತ್ತಮ ವೇದಿಕೆಯಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅಪ್ಪಯಣ್ಣ, ಹಾಡೋನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷ ಮುನೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾರಾಯಣಪ್ಪ. ನವ ಕರ್ನಾಟಕ ಯುವಶಕ್ತಿ ವೇದಿಕೆಯ ಕಾರ್ಯದರ್ಶಿ ಉದಯ ಆರಾಧ್ಯ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.