ಪತ್ರಕರ್ತರ ಮೇಲೆ ಹಲ್ಲೆ ಯತ್ನ ಖಂಡಿಸಿ ಜಿಲ್ಲಾಧಿಕಾರಿ ಯವರಿಗೆ ಮನವಿಪತ್ರ ಸಲ್ಲಿಕೆ.

ದೊಡ್ಡಬಳ್ಳಾಪುರ:ಹೊಸಕೋಟೆ ತಾಲೂಕು ಬಿಸನನಹಳ್ಳಿ ಗ್ರಾಮದಲ್ಲಿ ನಡೆದ ಪತ್ರಕರ್ತರ ಹಲ್ಲೆ ಯತ್ನ ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಹಾಗೂ ಪತ್ರಕರ್ತರ ರಕ್ಷಣೆಗೆ ಒತ್ತಾಯಿಸಿ ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್,ಪ್ರದಾನ ಕಾರ್ಯದರ್ಶಿ ಕೇಬಲ್ ರಮೇಶ್, ಖಜಾಂಚಿ ಶಾಂತ ಮೂರ್ತಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಕುಸುಮ ಪಾರ್ವತರಾಜು, ಕರ್ನಾಟಕ ಸಂಪಾದಕರ ವರದಿಗಾರರ ಸಂಘದ ಜಿಲ್ಲಾಧ್ಯಕ್ಷ ರಾಮೇಗೌಡ, ಕಾರ್ಯದರ್ಶಿ ನಟರಾಜ್, ಹೊಸಕೋಟೆ ತಾಲೂಕು ತಾಲೂಕು ಕಾರ್ಯನಿರತ ಸಂಘದ ಅಧ್ಯಕ್ಷ ಹೆಚ್. ಕೆ. ಮಂಜುನಾಥ್, ಕಾರ್ಯದರ್ಶಿ ನಾಗರಾಜ್, ಜಿಲ್ಲಾ ನಿರ್ದೇಶಕ ದೇವ ನಂದಿನಿ ಸೇರಿದಂತೆ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ತಾಲೂಕಿನ ಹಲವಾರು ಪತ್ರಕರ್ತರು ಹಾಜರಿದ್ದರು.