ಯಳಂದೂರು: ತಾಲ್ಲೂಕಿನ ಗೌಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಅದ್ದೂರಿಯಾಗಿ ನಡೆಯಿತು.
ವಡಗೆರೆ ಗ್ರಾಮದಿಂದ ಗೌಡಹಳ್ಳಿ ಜೆ.ಎಸ್.ಎಸ್ ಪ್ರೌಢ ಶಾಲೆಯವರಗೆ ಜಾಥಾವು ಬಹಳ ಅದ್ದೂರಿಯಾಗಿ ನಡೆಯಿತು
ಸಂವಿಧಾನ ಜಾಗೃತಿ ಜಾಥಾಕ್ಕೆ ಗೌಡಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ರಾದ ಗಾಯಿತ್ರಿ ಜಯಶಂಕರ್ ಪುಪ್ಪನಮನ ಸಲ್ಲಿಸಿ ಚಾಲನೆ ನೀಡಿದರು.
ಮುಖ್ಯಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಶಿವಲಂಕಾರ್ ರವರು ನಮ್ಮ ಸಂವಿಧಾನ ನಮಗೆ ನೀಡಿರುವ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ಅರಿತುಕೊಂಡು ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದು ತಿಳಿಸಿದರು
ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರು ಅನೇಕ ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತಕ್ಕೆ ಸ್ವಾತಂತ್ರ್ಯ ಸಮಾನತೆ ಸಹೋದರತೆ ಸಹಬಾಳ್ವೆ ಎಲ್ಲಾವನ್ನು ಒಳಗೊಂಡ ಒಂದು ಬೃಹತ್ ಲಿಖಿತ ಸಂವಿಧಾನವನ್ನು ರಚಿಸಿ ಕೊಟ್ಟಿದ್ದಾರೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣಾಧಿಕಾರಿ ರಾಜೇಶ್ ಗ್ರಾಮ ಪಂಚಾಯಿತಿ ಸದಸ್ಯರಾದ ರಘು.ಚಂದ್ರುಶೇಖರ್.ಉಮೇಶ್.ಮಲ್ಲು.ಮಮತ.ಶಿವನಂಜಮ್ಮ.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮೇಶ್ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು
ವರದಿ ಆರ್ ಉಮೇಶ್ ಮಲಾರಪಾಳ್ಯ