ಅದ್ದೂರಿ ದೊಡ್ಡಬಳ್ಳಾಪುರ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ.

ಅದ್ದೂರಿ ಬ್ರಹ್ಮರಥೋತ್ಸವ : ರಥೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗಿ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು

ತಾಲೂಕಿನ ಮೂಲೆ ಮೂಲೆಗಳಿಂದ ಹರಿದು ಬಂದ ಭಕ್ತಸಾಗರ ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದರ್ಶನ ಪಡೆದು ಪುನೀತರಾದರು. ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಕೋರಿ ರಥಕ್ಕೆ ಬಾಳೆಹಣ್ಣು ಎಸೆಯುವ ಮೂಲಕ ಸಂಭ್ರಮಿಸಿದರು.

ಬ್ರಹ್ಮರಥೋತ್ಸವದಲ್ಲಿ ತಾಲೂಕಿನ ಶಾಸಕರಾದ ಧೀರಜ್ ಮುನಿರಾಜು, ಜೆಡಿಎಸ್ ಪಕ್ಷದ ಮುಖಂಡರಾದ ಬಿ ಮುನೇಗೌಡ, ಮಾಜಿ ಶಾಸಕರಾದ ವೆಂಕಟರಮಣಯ್ಯ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ದೇವರ ದರ್ಶನ ಪಡೆದರು