ಎಪ್ರಿಲ್ 1ರಂದು ದೊಡ್ಡಬಳ್ಳಾಪುರ ನಗರಕ್ಕೆ ನಿಖಿಲ್ ಕುಮಾರಸ್ವಾಮಿ, ಡಾ.ಕೆ.ಸುಧಾಕರ್ ಭೇಟಿ, ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಮೈತ್ರಿ ಸಭೆ

ದೊಡ್ಡಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಡಾ.ಕೆ.ಸುಧಾಕರ್ ಗೆಲುವಿಗಾಗಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಸಭೆ ನಡೆಯಲಿದ್ದು, ಸಭೆಗೆ ನಿಖಿಲ್ ಕುಮಾರಸ್ವಾಮಿ ಮತ್ತು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಿ.ಮುನೇಗೌಡ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಬಿ.ಮುನೇಗೌಡರವರು, ನರೇಂದ್ರಮೋದಿ ದೇಶದ ಪ್ರಧಾನಿಯಾಗಬೇಕೆಂಬುದು ಮಾಜಿ ಪ್ರಧಾನಿ ದೇವೇಗೌಡರ ನಿಲುವು ಮತ್ತು ಪಕ್ಷದ ನಿಲುವು, ಮತ್ತು ದುಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿಯಾಗಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಡಾ.ಕೆ.ಸುಧಾಕರ್ ಅಭ್ಯರ್ಥಿ ಸಮಂಜಸವಾಗಿದೆ, ಚುನಾವಣೆ ಗೆಲುವಿಗಾಗಿ ಎಪ್ರಿಲ್ 1 ರಂದು ಒಕ್ಕಲಿಗರ ಭವನದಲ್ಲಿ ಎರಡು ಪಕ್ಷಗಳ ನಡುವೆ ಮೈತ್ರಿ ಸಭೆ ನಡೆಯಲಿದೆ,

ಅಂದು ಬೆಳಗ್ಗೆ 10 ಗಂಟೆಗೆ ದೇವನಹಳ್ಳಿ, ಮಧ್ಯಾಹ್ನ 2 ಗಂಟೆ ದೊಡ್ಡಬಳ್ಳಾಪುರ, ಸಂಜೆ 4 ಗಂಟೆಗೆ ನೆಲಮಂಗಲದಲ್ಲಿ ಸಭೆ ನಡೆಯಲಿದೆ, ಅಂದಿನ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ, ಅಭ್ಯರ್ಥಿ ಡಾ.ಕೆ.ಸುಧಾಕರ್ ಸೇರಿದಂತೆ ಎರಡು ಪಕ್ಷಗಳ ಕಾರ್ಯಕರ್ತರು ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸಭೆಗೆ ಬರುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಥಿಯಲ್ಲಿ ಜೆಡಿಎಸ್ ಮುಖಂಡರಾದ ಲಕ್ಷ್ಮೀಪತಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ವಡ್ಡರಹಳ್ಳಿ ರವಿ, ಶಾಂತಮ್ಮ, ದೇವರಾಜಮ್ಮ, ಮಂಜುನಾಥ್ , ರಂಗಸ್ವಾಮಿ, ಸಿದ್ದಪ್ಪ, ಕೆಂಪೇಗೌಡ, ಜಗನ್ನಾಥ್ ಚಾರ್, ನರಸಿಂಹಗೌಡ, ಅಶ್ವಥ್ಧನಾರಾಯಣ್, ನರಸಿಂಹಮೂರ್ತಿ, ನಟರಾಜ್, ಶ್ರೀನಿವಾಸ್. ಶಶಿಕಲಾ. ಜ್ಯೋತಿ, ಶಾರದಾಮುಂತಾದವರು ಇದ್ದರು.