ಕನಕ ದಾಸರ ಸಂದೇಶ ನಿತ್ಯ ಬದುಕಿಗೆ ಪೂರಕ–ಜಿ. ಎಂ. ನಾಗರಾಜು
ದೊಡ್ಡಬಳ್ಳಾಪುರ:ಕನಕದಾಸರು ತಮ್ಮ ಕೀರ್ತನೆಗಳು ಮತ್ತು ಕಾವ್ಯಗಳ ಮೂಲಕ ಜೀವನ ಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವ ಉಪದೇಶಗಳನ್ನು ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.
ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜನೆ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ 537ನೇ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು ಕನಕದಾಸರು ಮೂಲತಃ ಬಾಡ ಪ್ರಾಂತ್ಯದ ದಂಡನಾಯಕರಾಗಿದ್ದರು. ಯುದ್ಧವೊಂದರಲ್ಲಿ ಸೋತ ಅವರಿಗೆ ವೈರಾಗ್ಯ ಉಂಟಾಗಿ ಜೀವನದ ಆಸೆಗಳನ್ನು ತ್ಯಜಿಸಿ ತಾಳ ತಂಬೂರಿ ಹಿಡಿದು ಜನರಿಗೆ ತಮ್ಮ ಕೀರ್ತನಗಳ ಮೂಲಕ ದೇವರ ನಾಮವನ್ನು ಅಡುವುದರ ಮೂಲಕ ಹರಿಭಕ್ತರಾಗಿದರು. ಹರಿದಾಸ ಸಾಹಿತ್ಯಕ್ಕೆ ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಉತ್ತಮ ಕಾವ್ಯ ಕೃತಿಗಳನ್ನು ಕನಕದಾಸರು ನೀಡಿದ್ದಾರೆ ಎಂದರು
ಕನಕದಾಸರು ಸರಳ ಭಾಷೆಯಲ್ಲಿ ಕೀರ್ತನೆಗಳನ್ನು ಮತ್ತು ಕಾವ್ಯಗಳನ್ನು ರಚಿಸುವ ಮೂಲಕ ಕನ್ನಡತನ ಎತ್ತಿ ಹಿಡಿದರು. ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರವಾಗಿದೆ. ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸಿದರು ಕುಲ ಕುಲವೆಂದು ಹೊಡೆದಾಡದಿರಿ ಮುಂತಾದ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಜಾತಿ ವ್ಯವಸ್ಥೆಯ ನ್ಯೂನತೆಯನ್ನು ಹೋಗಲಾಡಿಸಬೇಕೆಂದರು ಕನಕದಾಸರು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಸಮಾಜದ ಪರಿವರ್ತನೆ ಕನಕದಾಸರ ಸಾಹಿತ್ಯದ ಪ್ರಮುಖ ಆಶಯವಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಅಧ್ಯಕ್ಷ ಜಿ.ಸುರೇಶ್ ಮಾತನಾಡಿ, ಸಾಮಾಜಿಕ ಪ್ರಜ್ಞೆಯ ವಿಕಸನಕ್ಕೆ ಬೇಕಾದ ಮಾರ್ಗಗಳು ಕನಕದಾಸರ ಸಾಹಿತ್ಯದಲ್ಲಿ ಇವೆ. ಆದ್ದರಿಂದ ಅವರ ಸಾಹಿತ್ಯ ವೈಚಾರಿಕ ಪ್ರಬುದ್ಧತೆಯಿಂದ ಕೂಡಿದೆ. ಪ್ರತಿಯೊಂದು ಕೃತಿಯಲ್ಲಿಯೂ ಕನಕದಾಸರು ಕವಿತ್ವ-ಕಲ್ಪನೆಗಳ ಜೊತೆಗೆ ವಾಸ್ತವ ನಿಲುವುಗಳನ್ನು ಪ್ರತಿಪಾದಿಸಿದ್ದಾರೆ. ಕನಕದಾಸರು ತಮ್ಮ ವೈಚಾರಿಕ ಮತ್ತು ಪ್ರತಿಭಟನಾ ನೆಲೆಗಟ್ಟಿನಿಂದ ದಾಸಸಾಹಿತ್ಯಕ್ಕೆ, ತನ್ಮೂಲಕ ಕನ್ನಡ ಸಾಹಿತ್ಯಕ್ಕೆ ವೈಚಾರಿಕ ಪ್ರಭೆಯನ್ನು ನೀಡಿದ್ದಾರೆ ಎಂದರು
ಈ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹದೇವ್, ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ದೊಡ್ಡಬಳ್ಳಾಪುರ ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜು ಶಿರವಾರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ಕನ್ನಡ ಸಾಹಿತ್ಯ ಪರಿಷತ್ತು ಪ್ರತಿನಿಧಿಗಳಾದ ನಾಗರತ್ನಮ್ಮ, ಸಫೀರ್, ಶ್ರೀನಿವಾಸ್ ಮುಂತಾದವರು ಭಾಗ ವಹಿಸಿದ್ದರು