ಸಂಸದ ಸುನಿಲ್ ಬೋಸ್ ಶಾಸಕ ಎಆರ್ ಕೃಷ್ಣಮೂರ್ತಿ ಅವರಿಗೆ ಸನ್ಮಾನ

ಯಳಂದೂರು: ತಾಲ್ಲೂಕಿನ ಮದ್ದೂರು ಗ್ರಾಮದಲ್ಲಿ ಸ್ವಾಭಿಮಾನಿ ಪತ್ತಿನ ಸಹಕಾರ ಸಂಘ ಹಾಗೂ ಛಲವಾದಿ ಮಹಾಸಭಾದ ಪದಾಧಿಕಾರಿಗಳಿಂದ ಚಾಮರಾಜನಗರ ಲೋಕಸಭಾ ಸದಸ್ಯರಾದ ಸುನಿಲ್ ಬೋಸ್ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸ್ವಾಭಿಮಾನಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಛಲವಾದಿ ಮಹಾಸಭಾದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆಟೋ ವೆಂಕಟೇಶ್, ಸ್ವಾಭಿಮಾನಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸಿದ್ದರಾಜು, ಕಾರ್ಯದರ್ಶಿ ವೈ.ಕೆ.ಮೋಳೆ ಸುಧಾಕರ್, ಸಂಘದ ನಿರ್ದೇಶಕರಾದ ಯರಿಯೂರು ಪ್ರಕಾಶ್, ರಾಜಶೇಖರ್, ಅಗರ ಪಾಪಣಿ, ಪರಶಿವ, ಸದಸ್ಯರಾದ ಅಗ್ರಹಾರ ಶಿವಕುಮಾರ್, ಕೊಳ್ಳೇಗಾಲ ಚಾಮರಾಜು ಇತರರು ಇದ್ದರು

ವರದಿ ಆರ್ ಉಮೇಶ್ ಮಲಾರಪಾಳ್ಯ