ಗೌಡಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ವಸಂತ ಚಿನ್ನಸ್ವಾಮಿ ಆಯ್ಕೆ
ಯಳಂದೂರು: ತಾಲ್ಲೂಕಿನ ಗೌಡಹಳ್ಳಿ ಗ್ರಾಮ ಪಂಚಾಯಿತಿ ಯಲ್ಲಿ ಬಾರಿ ಕುತೂಹಲ ಮೂಡಿಸಿದ ಅಧ್ಯಕ್ಷರ ಚುನಾವಣೆಯಲ್ಲಿ ವಸಂತ ಚಿನ್ನಸ್ವಾಮಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು
ಈ ಹಿಂದೆ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದ ಹಿನ್ನೆಲೆಯಲ್ಲಿ 12 ಮತಗಳನ್ನು ಪಡೆದು ವಸಂತ ರವರು ಜಯಶೀಲಾರಾಗಿದ್ದಾರೆ.ಎಂದು ಚುನಾವಣೆ ಅಧಿಕಾರಿಗಳಾದ ಸಕಲೇಶ್ ರವರು ಘೋಷಣೆ ಮಾಡಿದರು
ಈ ವೇಳೆಯಲ್ಲಿ ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಗೆಲುವನ್ನು ಸಂಭ್ರಮಿಸಿದರು.
ಈ ವೇಳೆಯಲ್ಲಿ ನೂತನ ಅಧ್ಯಕ್ಷರಿಗೆ ಗ್ರಾಮಸ್ಥರು ಶುಭ ಕೋರಿದರು.
ನಂತರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಸಂತ ರವರು ಮಾತನಾಡಿ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು ಸಿಕ್ಕಿರುವ ಕಡಿಮೆ ಅವಧಿಯಲ್ಲಿ ಅಭಿವೃದ್ಧಿ ಕೆಲಸ ಮಾಡಿ ಈ ಗ್ರಾಮ ಪಂಚಾಯಿತಿಗೆ ಒಳಪಡುವ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು ಈ ಸಂದರ್ಭದಲ್ಲಿ ಸದಸ್ಯರಾದ ರಘು.ಶಾಂತಮಲ್ಲು. ಸುಂದರ್. ನೀಲಾವೇಣೆ.ನಂದಿನಿ.ಮಮತ. ಶಿವನಂಜಮ್ಮ.ಭಾಗ್ಯಮ್ಮ.ಪುಷ್ಬಪಿ ಡಿ ಓ ಶಿವಕುಮಾರ್ ಹಾಗೂ ಗ್ರಾಮಸ್ಥರು ಸಾರ್ವಜನಿಕರು ಹಾಜರಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ