ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು ರೂ.75ಲಕ್ಷಕ್ಕೂ ಅಧಿಕ ಮೊತ್ತ ಸಂಗ್ರಹವಾಗಿದೆ.

ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಹುಂಡಿಯಲ್ಲಿ ಭಕ್ತರ ಕಾಣಿಕೆಯನ್ನು ಸೋಮವಾರ ಎಣಿಕೆ ಮಾಡಲಾಯಿತು.
ಹುಂಡಿ ಎಣಿಕೆಯಲ್ಲಿ ಒಟ್ಟು 75, 30, 068ರೂ. ಮೊತ್ತ ಸಂಗ್ರಹವಾಗಿದೆ.

ಇದರೊಂದಿಗೆ 76,500 ರೂ ಮೌಲ್ಯದ 02 ಕೆಜಿ 250 ಗ್ರಾಂ ಬೆಳ್ಳಿ, 18900 ರೂ ಮೌಲ್ಯದ 3 ಗ್ರಾ.600 ಮಿಲಿ ತೂಕದ ಚಿನ್ನ ಹುಂಡಿಯಲ್ಲಿ ಸಂಗ್ರಹವಾಗಿದೆ.ದೇವಾಲಯದ ಹುಂಡಿ ಎಣಿಕೆ ಕಾರ್ಯದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಾಹಶೀಲ್ದಾರ್ ರವರು ಜಿ.ಜೆ. ಹೇಮಾವತಿ, ಪ್ರಧಾನ ಅರ್ಚಕ ಆರ್ ಸುಬ್ರಹ್ಮಣ್ಯ, ದೇವಾಲಯದ ಸಿಬ್ಬಂದಿ ನಂಜಪ್ಪ ಹಾಗೂ ದೇವಾಲಯದ ಸಿಬ್ಬಂದಿಗಳು ಹಾಗೂ ಕೆನರಾ ಬ್ಯಾಂಕ್ ಸಿಬ್ಬಂದಿ ಪೊಲೀಸ್ ಇಲಾಖೆ ಹಾಗೂ ದೇವಾಲಯಕ್ಕೆ ಬಂದ ಭಕ್ತಾದಿಗಳು ಹಾಜರಿದ್ದರು.