*ಮಹಿಳೆಯರು ಸಮಸ್ಯೆಗಳನ್ನು ಮೆಟ್ಟಿನಿಂತಾಗ ಮಾತ್ರ ಮಹಿಳೆಯರ ಸಬಲೀಕರಣ ಸಾಧ್ಯ : ಜಿಲ್ಲಾ ನ್ಯಾಯಾಧೀಶರಾದ ಬಿ. ಎಸ್ ಭಾರತಿ ಅಭಿಮತ*
ಚಾಮರಾಜನಗರ: ಡಿಸೆಂಬರ್ 23, ಮಹಿಳೆಯರು ಮಾನಸಿಕ ಸದೃಢರಾಗಿ ಸಾಮಾಜಿಕ ಸಮಸ್ಯೆಗಳನ್ನು ಮೆಟ್ಟಿನಿಂತಾಗ ಮಾತ್ರ ಮಹಿಳೆಯರ ಸಬಲೀಕರಣ ಸಾಧ್ಯವಾಗಲಿದೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಎಸ್ ಭಾರತಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ ಸಭಾಂಗಣದಲ್ಲಿಂದು ರಾಷ್ಟೀಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಎರ್ಪಡಿಸಲಾಗಿದ್ದ “ಮಹಿಳಾ ಸಬಲೀಕರಣ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಸೀಮಿತ ಚೌಕಟ್ಟಿನಿಂದ ಹೊರಬಂದು ದೈನಂದಿನ ವಿದ್ಯಮಾನದ ಬಗ್ಗೆ ತಿಳಿದುಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ದೈಹಿಕ, ಮಾನಸಿಕವಾಗಿ ಸದೃಢರಾಗಿ ಸಮಸ್ಯೆಗಳನ್ನು ಎದುರಿಸಿದಾಗ ಸಬಲೀಕರಣ ಸಾಧ್ಯ. ನಾವು ಸಾಮಾಜಿಕವಾಗಿ ಬದುಕುತ್ತಿರುವುದರಿಂದ ನೆರೆಹೊರೆಯವರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಿದ್ದಾರೆ. ಅವರೊಡನೆ ಉತ್ತಮ ಬಾಂಧವ್ಯ ಹೊಂದÀಬೇಕು ಎಂದರು.
ಮಕ್ಕಳನ್ನು ಇತರರ ಮೇಲೆ ಅವಲಂಬಿತರಾಗದೇ ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವಂತೆ ಬೆಳೆಸುವುದು ಪೆÇೀಷಕರ ಜವಾಬ್ದಾರಿಯಾಗಿದೆ. ಪ್ರಸ್ತುತ ಸಮಾಜದಲ್ಲಿ ಸುಶಿಕ್ಷಿತರೆ ದೌರ್ಜನ ಎಸಗುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ. ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ಗೌರವಯುತವಾಗಿ ನಡೆಸಿಕೊಳ್ಳುವವರು ಇದ್ದಾರೆ. ಆದರೆ ಅವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು. ಆಗ ಸಮಾಜದಲ್ಲಿ ಸಮಾನತೆ ಮೂಡಲಿದೆ ಎಂದು ಜಿಲ್ಲಾ ನ್ಯಾಯಾಧೀಶರಾದ ಭಾರತಿ ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವಿಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಅವರು ಮಾತನಾಡಿ ಸಂವಿಧಾನದ ಅನುಚ್ಛೇದದಲ್ಲಿ ಎಲ್ಲರೂ ಸಮಾನರೆಂದು ತಿಳಿಸಲಾಗಿದ್ದು, ಯಾವುದೇ ವ್ಯಕ್ತಿಯನ್ನು ಹುಟ್ಟಿನಿಂದಾಗಲಿ ಜಾತಿ, ಧರ್ಮ, ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುವಂತಿಲ್ಲ ಪ್ರತಿಯೊಬ್ಬರು ಸಮಾನರಾಗಿದ್ದು, ಇದು ಹೆಣ್ಣಿಗೂ ಅನ್ವಂiÀiವಾಗಲಿದೆ. ಮಹಿಳೆಯರು ತಮ್ಮ ಗೌರವಕ್ಕೆ ಧಕ್ಕೆ ಉಂಟಾದಾಗ ಕಾನೂನಿನ ಮೊರೆ ಹೋಗಲು ಅವಕಾಶವಿದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ನಂಜಯ್ಯ ಅವರು ಮಾತನಾಡಿ ಮಹಿಳೆಯರ ಸಮಾನತೆಗೆ ಹೋರಾಟ ಮಾಡಿದವರಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪ್ರಮುಖರಾಗಿದ್ದಾರೆ. ಮಹಿಳೆಯರಿಗೆ ಸಮಾನತೆ ಇನ್ನೂ ಕೆಲವಡೆ ಮರಿಚಿಕೆಯಾಗಿದೆ. ಸಮಾಜದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿದಾಗ ನಮ್ಮ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಮಂಜುನಾಥ್, ಜಿಲ್ಲಾ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ಆಸರೆ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಟಿ. ಜೆ ಸುರೇಶ್, ಬಾಲನ್ಯಾಯ ಮಂಡಳಿಯ ಸದಸ್ಯರಾದ ಸರಸ್ವತಿ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಮುಕ್ತಾರ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.