ಭಾರತ ಸೇವಾದಳ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳ

ದೊಡ್ಡಬಳ್ಳಾಪುರ:ವಿದ್ಯಾರ್ಥಿಗಳು ಈಗಿನಿಂದಲೇ ತಮ್ಮ ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರ ಪ್ರೇಮ,ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸಿಕೊಳ್ಳಬೇಕು
ಎಂದು ತಾಲೂಕು ದಂಡಾಧಿಕಾರಿ ಶ್ರೀ ವಿದ್ಯಾ ವಿಭಾ ರಾಥೋಡ್ ಅವರು ಹೇಳಿದರು

ಅವರು ನಗರದ ಅಂಬೇಡ್ಕರ್ ಭವನದಲ್ಲಿ ಭಾರತ ಸೇವಾದಳದ ತಾಲೂಕು ಸಮಿತಿಯಿಂದ ಭಾರತ್ ಸೇವಾ ಸೇವಾದಳದ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳದಲ್ಲಿ ಮಾತನಾಡುತ್ತಾ ಪ್ರಸ್ತುತ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಈಗಿನಿಂದಲೇ ರಾಷ್ಟ್ರಪ್ರೇಮ ರಾಷ್ಟ್ರ ಭಕ್ತಿಯನ್ನು ಬೆಳೆಸುವ ಕೆಲಸ ಮುಖ್ಯವಾಗಿ ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸುವಂತಹ ಕೆಲಸ ಆಗಬೇಕು ಮಹಾತ್ಮ ಗಾಂಧೀಜಿ ಅವರು ಕಂಡಂತಹ ಕನಸು ನನಸಾಗಬೇಕು ಇಂತಹ ಕಾರ್ಯಗಳನ್ನು ಭಾರತ ಸೇವಾದಳ ಶಾಲೆಗಳಿಗೆ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ವಿಷಯ ಎಂದರು.

ಕಾರ್ಯಕ್ರಮಕ್ಕೆ ಮೊದಲು ಸುಮಾರು 300 ವಿದ್ಯಾರ್ಥಿಗಳು ನಗರದ ನೆಲದಾಂಜನೇಯ ಸ್ವಾಮಿ ದೇವಸ್ಥಾನದಿಂದ ಅಂಬೇಡ್ಕರ್ ಭವನದವರೆಗೂ ಪ್ರಭಾತ ಬೇರಿ ಮೂಲಕ ಜಾಥ ನಡೆಸಿದರು.

ಈ ಕಾರ್ಯಕ್ರಮಕ್ಕೆ ಶಾಸಕರಾದ ಧೀರಜ್ ಮುನಿರಾಜು ರವರು ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು.

ವೇದಿಕೆ ಕಾರ್ಯಕ್ರಮದಲ್ಲಿ ಭಾರತ ಸೇವಾದಳದ ಜಿಲ್ಲಾ ಸಮಿತಿ ಅಧ್ಯಕ್ಷ ಲಕ್ಷ್ಮೀ ಪತಿ ಅವರು ಮಾತನಾಡಿ ತಾಲೂಕಿನಲ್ಲಿರುವ ಎಲ್ಲಾ ಶಾಲೆಯ ಎಲ್ಲಾ ಶಾಖೆಗಳಿಗೆ ಸುಮಾರು 5000 ಸಮವಸ್ತ್ರಗಳನ್ನು ಉಚಿತವಾಗಿ ನೀಡಲಾಗುವುದು ಎಂದರು, ತಾಲೂಕಿನ ಶಾಖಾ ನಾಯಕರಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವಲ್ಲಿ ಶ್ರಮ ವಹಿಸುತ್ತಿರುವುದು ತುಂಬಾ ಸಂತೋಷ ಎಂದರು.
ನಂತರ ಭಾರತೀಯ ಸೇವಾದಳದ ತಾಲೂಕು ಸಮಿತಿಯ ಅಧ್ಯಕ್ಷ ಆರ್. ವಿ ಮಹೇಶ್
ಮಾತನಾಡಿದ ಭಾರತ ಸೇವಾದಳ ಸ್ವಾತಂತ್ರ್ಯಕ್ಕಾಗಿ ಯುವಕರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಸಾಮರಸ್ಯ ಮೂಡಿಸುವಲ್ಲಿ ಭಾರತ ಸೇವಾದಳ ಮಹತ್ವದ ಕೆಲಸ ಮಾಡುತ್ತಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಟಿ ಎ ಪಿ ಎಂ ಸಿ ನಿರ್ದೇಶಕ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಶ್ರೀಧರ್, ಹೊಸಕೋಟೆ ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಹರೀಶ್, ದೊಡ್ಡಬಳ್ಳಾಪುರ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ್, ನಗರಸಭೆ ಸದಸ್ಯ ಕಾಂತರಾಜ್, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಸಿ. ರಾಮಕೃಷ್ಣ ಕಾರ್ಯಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ, ವಿ.ಸಿ ಜ್ಯೋತಿ ಕುಮಾರ್ ,ವಕೀಲ ಆರ್ ವಿ ಶಿವಕುಮಾರ್ ಹಾಗೂ ತಾಲೂಕ ಸಮಿತಿಯ ನಿರ್ದೇಶಕರು ಮುಂತಾದವರು ಭಾಗವಹಿಸಿದ್ದರು.