ಮಜರಾ ಹೊಸಹಳ್ಳಿ ಗ್ರಾಮಪಂಚಾಯ್ತಿ ಯಿಂದ ಸ್ವಚ್ಛತಾ ಕಾರ್ಯಕ್ರಮ
ದೊಡ್ಡಬಳ್ಳಾಪುರ:ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಮಜರಹೊಸಹಳ್ಳಿ ಗ್ರಾಮದಲ್ಲಿ ಪಂಚಾಯತಿಯ ಎಲ್ಲಾ ಸದಸ್ಯರು ಹಾಗೂ ಪೌರಕಾರ್ಮಿಕರಿಂದ ಸ್ವಚ್ಛ ಶನಿವಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಸ್ತೆಬದಿ ಬಿದ್ದಿದ್ದ ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ರ್ಯಾಜ್ಯ ವಸ್ತುಗಳನ್ನು ವಿಂಗಡಿಸಿ ಕಸದ ಗಾಡಿಗೆ ತುಂಬಲಾಯಿತು ಕಾರ್ಯಕ್ರಮದಲ್ಲಿ ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸೇರಿದಂತೆ ಗ್ರಾಮ ಪಂಚಾಯತಿಯ ಎಲ್ಲರೂ ಭಾಗವಹಿಸಿದ್ದು ಮಜರಾಹೊಸಹಳ್ಳಿ ಗ್ರಾಮಪಂಚಾಯತಿಯ ಸ್ವಚ್ಛ ಶನಿವಾರ ಕಾರ್ಯಕ್ರಮ ಯಶಸ್ವಿಯಾಯಿತು ಪ್ರತಿ ತಿಂಗಳ ಮೂರನೇ ಶನಿವಾರ ಈ ರೀತಿಯ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಹಮ್ಮಿಕೊಂಡಿದ್ದು ಗ್ರಾಮಸ್ಥರು ಇಂತಹ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.