ನೂತನ ಗ್ರಾಮ ಪಂಚಾಯತಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎ.ಆರ್ ಕೃಷ್ಣಮೂರ್ತಿ
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನೂತನವಾಗಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ ಆರ್ ಕೃಷ್ಣಮೂರ್ತಿ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಹಳೆಯ ಗ್ರಾಮ ಪಂಚಾಯಿತಿ ಕಛೇರಿ ಶಿಥಿಲಗೊಂಡ ಕಾರಣದಿಂದ ಹೊಸದಾಗಿ ಕಛೇರಿಯನ್ನು ನಿರ್ಮಾಣ ಮಾಡಲು 15 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ನಂತರ ಹಂತಹಂತವಾಗಿ ಹಣ ಬಿಡುಗಡೆ ಮಾಡಿ ಕಟ್ಟಡವನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ನಂಜುಂಡಸ್ವಾಮಿ ಉಪಾಧ್ಯಕ್ಷೆ ನಾಗಮ್ಮ.ಗ್ಯಾರೆಂಟಿ ಯೋಜನೆಯ ಜಿಲ್ಲಾಧ್ಯಕ್ಷ ಹೆಚ್ ವಿ ಚಂದ್ರು.ಸಿ. ಓ.ಉಮೇಶ್.ಮಾದೇಗೌಡ.ನಿರ್ಮಿತಿ ಕೇಂದ್ರದ ಇಂಜಿನಿಯರ್ ನಂದಿಶ್.ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮದ ಮುಖಂಡರು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ