ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ
ಘೋಷಿಸಿದ ಸಿಎಂಗೆ ಕೆಯುಡಬ್ಲ್ಯೂಜೆ ಧನ್ಯವಾದ

ಬೆಂಗಳೂರು:ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆ
ಬಜೆಟ್‌ನಲ್ಲಿ ಪತ್ರಕರ್ತರಿಗೆ ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಆರೋಗ್ಯ ಯೋಜನೆ ಘೊಷಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಧನ್ಯವಾದ ತಿಳಿಸಿದ್ದಾರೆ.

ಪತ್ರಕರ್ತರಿಗೆ ಪ್ರತ್ಯೇಕ ಹೆಲ್ತ್ ಸ್ಕೀಂ ತರಬೇಕು ಎನ್ನುವುದು ಬಹಳ ವರ್ಷಗಳ ಹೋರಾಟ. ಈ ನಿಟ್ಟಿನಲ್ಲಿ ಯೋಜನೆ ಪ್ರಪ್ರಥಮ ಬಾರಿಗೆ ೋಷಣೆಯಾಗಿದೆ. ಇದನ್ನು ಸ್ವಾಗತಿಸೋಣ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ನಿವೃತ್ತ ಪತ್ರಕರ್ತರ ಮಾಸಾಶನವನ್ನು 12 ಸಾವಿರದಿಂದ 15 ಸಾವಿರಕ್ಕೆ ಮತ್ತು ಅವಲಂಬಿತರಿಗೆ 6 ಸಾವಿರದಿಂದ 7500ಕ್ಕೆ ಹೆಚ್ಚಳ ಮಾಡಿರುವುದಕ್ಕೂ ಧನ್ಯವಾದ ತಿಳಿಸಿದ್ದಾರೆ.

ಸಂಘದ ಹಕ್ಕೊತ್ತಾಯಕ್ಕೆ ಸ್ಪಂದಿಸಿ ಈ ನಿಟ್ಟಿನಲ್ಲಿ ಬೇಡಿಕೆ ಈಡೇರಿಸಲು ಸಹಕಾರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಅವರಿಗೂ ಧನ್ಯವಾದ ತಿಳಿಸಿದ್ದಾರೆ.

ಯೋಜನೆ ವಿಸ್ತರಿಸಲಿ:
ಆರೋಗ್ಯ ಯೋಜನೆಯನ್ನು ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೀಮಿತ ಮಾಡದೇ, ಮುಂದೆ ವಾರ್ತಾ ಇಲಾಖೆಯಿಂದ ಮಾನ್ಯತೆ ಪಡೆದಿರುವ ಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೆ ವಿಸ್ತರಿಸಬೇಕು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಒತ್ತಾಯಿಸಿದ್ದಾರೆ.

ಸಿಎಂಗೆ ಧನ್ಯವಾದ:
ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಂಘದ ಕಾರ್ಯದರ್ಶಿ ಸೋಮಶೇಖರ ಕೆರಗೋಡು, ರಾಜ್ಯ ಸಮಿತಿ ಸದಸ್ಯರಾದ ಚಲುವರಾಜು, ಸೋಮಶೇಖರ ಗಾಂಧಿ, ಬೆಂಗಳೂರು ಘಟಕದ ಶಿವರಾಜ, ಹಿರಿಯ ಪತ್ರಕರ್ತರಾದ ಚಿದಾನಂದ ಪಟೇಲ್, ವೆಂಕಟಸಿಂಗ್ ಮತ್ತಿತರರು ಹಾಜರಿದ್ದರು.

ಕೆ.ವಿ.ಪ್ರಭಾಕರ್‌ಗೆ ಧನ್ಯವಾದ:
ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ ಬಜೆಟ್‌ನಲ್ಲಿ ಘೋಷಣೆಯಾಗಲು ಕಾರಣರಾದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಂಘದ ಕಾರ್ಯದರ್ಶಿ ಸೋಮಶೇಖರ ಕೆರಗೋಡು, ರಾಜ್ಯ ಸಮಿತಿ ಸದಸ್ಯರಾದ ಚಲುವರಾಜು ಮತ್ತಿತರರು ಹಾಜರಿದ್ದರು