ಪದ್ಮಭೂಷಣ ಡಾ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿಯವರ 118ನೇ ಜಯಂತಿ ಆಚರಣೆ

ದೊಡ್ಡಬಳ್ಳಾಪುರ:ತ್ರಿವಿದ ದಾಸೋಹಿಗಳು ಪದ್ಮಭೂಷಣ ಡಾ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿಯವರ 118ನೇ ಜಯಂತಿಯ ಪ್ರಯುಕ್ತ ದೊಡ್ಡಬಳ್ಳಾಪುರ ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ವೃತ್ತ ತಾಲ್ಲೂಕು ಕಛೇರಿ ಹತ್ತಿರ ತಾಲ್ಲೂಕಿನ ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶಾಸಕರಾದ ಧೀರಜ್ ಮುನಿರಾಜು ಮಾತನಾಡಿ ಪ್ರತಿನಿತ್ಯ ಸಾವಿರಾರು ಮಕ್ಕಳಿಗೆ ವಿದ್ಯಾದಾನ, ಲಕ್ಷಾಂತರ ಜನರಿಗೆ ಅನ್ನದಾನ ಮಾಡಿರುವ ಶ್ರೀಗಳ ಕಾರ್ಯ ನಮ್ಮೆಲ್ಲರಿಗೂ ಮಾರ್ಗದರ್ಶನ, ಕಾಯಕವೇ ಕೈಲಾಸ ಎಂಬ ತತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ತಮ್ಮ ಜೀವನವನ್ನೇ ಸಮಾಜಕ್ಕೆ ಸಂದೇಶವಾಗಿ ಕೊಟ್ಟಂತಹ ಮಹಾನ್ ಸಂತರು ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ, ಇಂದು ಅವರ 118ನೇ ಜಯಂತಿ ಆಚರಣೆ ಮಾಡುತ್ತಿದ್ದು, ಅವರನ್ನು ಸ್ಮರಿಸುವ ಸೌಭಾಗ್ಯ ನಮ್ಮದಾಗಿದೆ ಎಂದರು.

ಪ್ರಸ್ತುತ ಯುವ ಸಮುದಾಯಕ್ಕೆ, ಮಕ್ಕಳಿಗೆ ಶ್ರೀಗಳ ಜೀವನ ಸಂದೇಶ ಹಾಗೂ ಸೇವಾ ಕಾರ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ರೂಪುಗೊಳ್ಳಲಿ ಎಂದು ಹಾರೈಸಿದರು.

 

ಕಾರ್ಯಕ್ರಮದಲ್ಲಿ ಸೋಮರುದ್ರ ಶರ್ಮ, ಬಸವರಾಜು, ಮಲ್ಲಿಕಾರ್ಜುನ್, ಎಸ್ ಪ್ರಕಾಶ್, ಪುಟ್ಟಬಸವರಾಜು, ನಗರ ಸಭಾ ಅಧ್ಯಕ್ಷರು ಸುಮಿತ್ರ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ರವಿಕುಮಾರ್, ನಗರ ಸಭಾ ಸದಸ್ಯರುಗಳು, ಅಖಿಲ ಭಾರತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಸುಜಯ್, ತಾಲ್ಲೂಕು ಯುವ ಘಟಕ ಅಧ್ಯಕ್ಷ ಗಗನ್, ಮಹಾ ಸಭಾ ಯುವಘಟಕ ಜಿಲ್ಲಾಧ್ಯಕ್ಷ ಲೋಕೇಶ್ ನಾಗಸಂದ್ರ, ಮಹಾಸಭಾ ಜಿಲ್ಲಾ ಉಪಾಧ್ಯಕ್ಷೆ ಲತಾ ಆರಾಧ್ಯ, ಮಹಿಳಾ ಘಟಕದ ಅಧ್ಯಕ್ಷರಾದ ಪ್ರೇಮಕುಮಾರಿ, ದರ್ಗಾಜೋಗಹಳ್ಳಿ ಗ್ರಾಮಪಂಚಾಯತಿ ಅಧ್ಯಕ್ಷರಾದ ಶಶಿಕಲಾ ನಾಗರಾಜ, ಸದಸ್ಯರಾದ ಜಯಶ್ರೀ, ತಾಲ್ಲೂಕಿನ ಶರಣ ಸಮಾಜ ಮುಖಂಡರು ಮತ್ತು ಸಮಸ್ತ ನಾಗರೀಕರು ಭಾಗವಹಿಸಿದ್ದರು.