ತೂಬಗೆರೆ ಅಂಬೇಡ್ಕರ್ ಯುವಕ ಸಂಘದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ
ದೊಡ್ಡಬಳ್ಳಾಪುರ:ತೂಬಗೆರೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ
ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಬಸ್ ನಿಲ್ದಾಣದಲ್ಲಿ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾವ್ ರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸಿಹಿ ಹಂಚುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.
ಕಾರ್ಯ ಕ್ರಮದಲ್ಲಿ ಪಾಲ್ಗೊಂಡಿದ್ದ ಯುವ ಮುಖಂಡ ಪ್ರತಾಪ್ ಮಾತನಾಡಿ ಡಾ. ಬಿ. ಆರ್. ಅಂಬೇಡ್ಕರ್ ಅವರು ಎಲ್ಲರಿಗೂ ಸಮಾನ ಅವಕಾಶವನ್ನು ಸಂವಿಧಾನದ ಮೂಲಕ ಮಾಡಿಕೊಟ್ಟ ನಿಜವಾದ ಸಾಮಾಜಿಕ ನ್ಯಾಯದ ಹರಿಕಾರ. ಅಂಬೇಡ್ಕರ್ ವಿಶ್ವದ ಮಹಾನ್ ಚಿಂತಕರಲ್ಲಿ ಒಬ್ಬರಾಗಿದ್ದಾರೆ. ಅಂಬೇಡ್ಕರ್ ಶೋಷಿತರ ಬದುಕನ್ನು ಕಟ್ಟಿಕೊಳ್ಳಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಕೇವಲ ದಲಿತ ವರ್ಗದವರಲ್ಲದೇ ಇಡೀ ಸಮಾಜದಲ್ಲಿ ತುಳಿತಕ್ಕೆ ಒಳಗಾದ ಎಲ್ಲಾ ವರ್ಗದ ಜನರ ಧ್ವನಿಯಾಗಿ ಸಮಾನತೆ, ಸಹೋದರತೆಗಾಗಿ, ಮೇಲು-ಕೀಳು ಎಂಬ ಭೇದ-ಭಾವ ಇರಬಾರದೆಂದು ತಿಳಿಸಿದ್ದಾರೆ ಎಂದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ್ ಮಾತನಾಡಿ ಭಾರತೀಯರಿಗೆ ಅಂಬೇಡ್ಕರ್ ರವರು ಸಂವಿಧಾನ ಎಂಬ ಶ್ರೇಷ್ಠ ಕೊಡುಗೆ ನೀಡಿದ್ದಾರೆ ಪ್ರಪಂಚದಲ್ಲೇ ಭಾರತದ ಪ್ರಜಾಪ್ರಭುತ್ವ ಹೆಚ್ಚು ಬಲಶಾಲಿಯಾಗಿರಲು ಅಂಬೇಡ್ಕರ್ ಕೊಟ್ಟ ಸಂವಿಧಾನ ಕಾರಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿ ಲಕ್ಷ್ಮಮ್ಮ ರಾಮಕೃಷ್ಣ, ಕೆಪಿಸಿಸಿ ಸದಸ್ಯ ಎಸ್ ಆರ್ ಮುನಿರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಣ್ಣ, ಕೃಷ್ಣಪ್ಪ, ಗಂಗಾಧರ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಯುವ ಮುಖಂಡ ಉದಯ ಆರಾಧ್ಯ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳಾದ ಮುನಿರಾಜು, ಮೂರ್ತಿ, ನಾಗರಾಜು ಹಾಗೂ ಗ್ರಾಮಸ್ಥರು ಹಾಜರಿದ್ದರು.