*ಸರ್ವೋತ್ತಮ ಪ್ರಶಸ್ತಿ ಪುರಸ್ಕಾರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಆಯ್ಕೆ*
ಚಾಮರಾಜನಗರ. ಅತ್ತ್ಯುತಮವಾಗಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ನೀಡುವ 2023 ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕಾರಕ್ಕೆ ಚಾಮರಾಜನಗರ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಆಯ್ಕೆಯಾಗಿದ್ದಾರೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಆಯ್ಕೆ ಸಮಿತಿಯು ಎಲ್ಲ ಅರ್ಹ ನಾಮ ನಿರ್ದೇಶನಗಳನ್ನು ಪರಿಶೀಲಿಸಿ ರಾಜ್ಯದ ವಿವಿಧ ಜಿಲ್ಲೆಗಳ 30 ಅರ್ಹ ಅಧಿಕಾರಿ ನೌಕರರನ್ನು ರಾಜ್ಯ ಮಟ್ಟದ ಸರ್ವೋತ್ತಮ ಪ್ರಶಸ್ತಿಗೆ ಆಯ್ಕೆಮಾಡಿದೆ. ಆಯ್ಕೆಯಾದವರಲ್ಲಿ ಚಾಮರಾಜನಗರ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಸೇರಿದ್ದಾರೆ.
ಪ್ರಶಸ್ತಿ ಪುರಸ್ಕೃತರಿಗೆ 50 ಸಾವಿರ ಪ್ರಶಸ್ತಿ ಮೊತ್ತ,ಫಲಕ,ಶಾಲು ಮತ್ತು ಹಾರಗಳೊಂದಿಗೆ ಗೌರವಿಸಲಾಗುತ್ತದೆ.
ವರದಿ ಆರ್ ಉಮೇಶ್ ಮಲಾರಪಾಳ್ಯ