ಏ 28ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮುಖ್ಯಮಂತ್ರಿ ಬೇಟಿ–ಹಲವು ಕಾಮಗಾರಿಗಳಿಗೆ ಚಾಲನೆ

ಬೆಂ.ಗ್ರಾ.ಜಿಲ್ಲೆ: ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ಏಪ್ರಿಲ್ 28 ರಂದು ಜಿಲ್ಲೆಗೆ ಆಗಮಿಸುತ್ತಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆ ಕೈಗೊ ಳ್ಳಲು ಅಧಿಕಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಸೂಚಿಸಿದರು. ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸರ್ಕಾರ ಅಧಿಕಾರಕ್ಕೆ ಬಂದು ಮುಂದಿನ ತಿಂಗಳಿಗೆ 2 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಎರಡು ವರ್ಷಗಳ ಸಾಧನೆ ಸಮಾರಂಭಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ನಿವೇಶನ ರಹಿತ ಅರ್ಹರನ್ನು ಗುರ್ತಿಸಲಾಗಿದ್ದು, ಫಲಾನುಭವಿಗಳಿಗೆ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸ ಲಾಗುವುದು. ಇದಕ್ಕಾಗಿ ಸಂಬಂಧಿಸಿದ ಆಯಾ ತಾಲ್ಲೂಕು ತಹಶೀಲ್ದಾರ್ ಗಳು, ಇಒ ಗಳು ಶೀಘ್ರ ಫಲಾನುಭವಿಗಳ ಅಂತಿಮ ಪಟ್ಟಿ ಸಿದ್ದಪಡಿಸಿ ಎಂದರು. ಪೋಡಿ ದುರಸ್ತಿ ಜಮೀನುಗಳಿಗೆ ಹಕ್ಕು ಪತ್ರ ವಿತರಿಸುವುದು, ವಸತಿ ರಹಿತರಿಗೆ ವಸತಿ ಸೌಲಭ್ಯ ವಿತರಣೆ ಮಾಡಲಾಗುವುದು. ಜಿಲ್ಲೆಯಲ್ಲಿ ಶಂಕುಸ್ಥಾಪನೆಗೆ, ಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿಗಳ ಪಟ್ಟಿಯನ್ನು ತಯಾರಿಸಿ, ವಿವಿಧ ಇಲಾಖೆಗಳು ಎರಡು ವರ್ಷಗಳಲ್ಲಿ ಮಾಡಿರುವಂತಹ ಆಯವ್ಯಯ, ಅಭಿವೃದ್ಧಿ ಕೆಲಸಗಳು, ಸೌಲಭ್ಯ ಪಡೆದ ಫಲಾನುಭವಿಗಳ ಮಾಹಿತಿ ನೀಡಿ ಜೊತೆಗೆ ಕಾರ್ಯಕ್ರಮದಲ್ಲಿ ವಿವಿಧ ಸೌಲಭ್ಯಗಳನ್ನು ವಿತರಿಸುವ ಸಲುವಾಗಿ ಸಂಬಂಧಪಟ್ಟ ಇಲಾಖೆಗಳು ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ವರದಿ ನೀಡಿ ಎಂದರು.