ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿಗಳಿಂದ ನೆರವೇರಿದ ಪ್ರಾಧಿಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ

ಚಾಮರಾಜನಗರ:ಏಪ್ರಿಲ್ 24 ಜಿಲ್ಲಾಡಳಿತ, ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಮಹದೇಶ್ವರಬೆಟ್ಟದ ವಜ್ರಮಲೆ ಭವನದ ಎದುರು ಆವರಣದಲ್ಲಿ ನೆರವೇರಿಸಿದರು.

ಮೈಸೂರಿನ ಮತ್ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.

ಸಾಲೂರು ಬೃಹನ್ಮಠಾಧ್ಯಕ್ಷರು ಹಾಗೂ ಪೀಠಾಧಿಪತಿಗಳಾದ ಶಾಂತಮಲ್ಲಿಕಾರ್ಜುನಸ್ವಾಮಿಗಳು ದಿವ್ಯ ಸಮ್ಮುಖ ವಹಿಸಿದ್ದರು.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ,ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್.ಸಿ. ಮಹದೇವಪ್ಪ ಅವರು ಘನ ಉಪಸ್ಥಿತರಿದ್ದರು.

ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಡಾ.ಡಿ. ತಿಮ್ಮಯ್ಯ,ಉನ್ನತ ಹಿರಿಯ ಅಧಿಕಾರಿ ಎಲ್.ಕೆ.ಅತೀಕ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಧಿಕಾರಿ ಮೋನಾ ರೋತ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಮಲೈ ಮಹದೇಶ್ವರ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಮತ್ತಿತರ ಗಣ್ಯರು ಭಾಗವಹಿಸಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ