Gruha Lakshmi: ಗೃಹಲಕ್ಷ್ಮೀ ಯೋಜನೆಗೆ ಜು.19ರಂದು ಚಾಲನೆ, ಅರ್ಜಿ ಸಲ್ಲಿಸುವ ಮುನ್ನ ಇದನ್ನು ಓದಿ
ಕರ್ನಾಟಕ ರಾಜ್ಯ ಸರ್ಕಾರವು ಚುನಾವಣೆಗೂ ಮುನ್ನವೇ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಯು ಜುಲೈ 19 ರಿಂದ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅರ್ಜಿ ಸ್ವೀಕರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.
ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿ ಮಾಡಿರುವ ಯೋಜನೆಯಾಗಿದ್ದು, ಇದರಡಿಯಲ್ಲಿ ಪ್ರತಿ ತಿಂಗಳು ಕೂಡಾ ಮನೆಯ ಒಡತಿಗೆ ಎರಡು ಸಾವಿರ ರೂಪಾಯಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಒಂದು ಕುಟುಂಬದಲ್ಲಿ ಮನೆಯ ಯಜಮಾನತ್ವವನ್ನು ಮಹಿಳೆ ವಹಿಸಿದ್ದರೆ ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ನೀವು ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಬೇಕಾದ ಮಾಹಿತಿಯನ್ನು ನಾವಿಲ್ಲಿ ವಿವರಿಸಿದ್ದೇವೆ ಮುಂದೆ ಓದಿ….
ಈ ಯೋಜನೆಯ ಮಾರ್ಗಸೂಚಿ, ಮಾನದಂಡಗಳು
* ಈ ಯೋಜನೆಯ ಫಲಾನುಭವಿಗಳು 2023ರ ಜುಲೈ 16 ರಿಂದ ಅರ್ಜಿ ಸಲ್ಲಿಸಬೇಕು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್‌ನಲ್ಲಿ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. * ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ನೀಡುವ ಅಂತ್ಯೋದರ, ಬಿಪಿಎಲ್, ಎಪಿಎಲ್ ಪಡಿತ ಚೀಟಿಗಳಲ್ಲಿ ಕುಟುಂಬದ ಯಾಜಮಾನಿ ಎಂದು ಮಹಿಳೆಯನ್ನು ಗುರುತಿಸಲಾಗಿದ್ದರೆ ಮಾತ್ರ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿದ್ದಾರೆ.
Gruha Lakshmi scheme: ಮಹಿಳೆಯರೇ ಗಮನಿಸಿ, ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಲಿಂಕ್ ಕಡ್ಡಾಯವಲ್ಲ
* ಒಂದು ಕುಟುಂಬದಲ್ಲಿ ಒಂದಕ್ಕಿಂತ ಅಧಿಕ ಮಹಿಳೆಯರು ಇದ್ದರೆ ಎಲ್ಲರಿಗೂ ಈ ಯೋಜನೆಯ ಲಾಭ ಲಭ್ಯವಾಗುವುದಿಲ್ಲ. ಮನೆಯ ಯಜಮಾನಿ ಎಂದು ಗುರುತಿಸಲ್ಪಟ್ಟ ಒಬ್ಬರಿಗೆ ಮಾತ್ರ ಈ ಯೋಜನೆಯ ಮೂಲಕ ಎರಡು ಸಾವಿರ ರೂಪಾಯಿ ಲಭ್ಯವಾಗುತ್ತದೆ.
* ಆನ್‌ಲೈನ್ ಆಪ್, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸ್ಥಳೀಯವಾಗಿ ಕಾಂಗ್ರೆಸ್ ಕಾರ್ಯಕರ್ತರು ಈ ಅರ್ಜಿ ಸಲ್ಲಿಸುವ ಕಾರ್ಯವನ್ನು ಮಾಡುತ್ತಿದ್ದು, ಅವರ ಸಹಾಯ ಪಡೆಯಬಹುದಾಗಿದೆ.
Shakthi Yojana: ಶಕ್ತಿ ಯೋಜನೆ: ಯಾರಿಗೆ ಲಾಭ, ಯಾರಿಗೆ ನಷ್ಟ, ಏನಿದು ಯೋಜನೆ ತಿಳಿಯಿರಿ
* ಆರಂಭದಲ್ಲಿ ಯೋಜನೆಯ ಲಾಭ ಪಡೆಯಬೇಕಾದರೆ ಫಲಾನುಭವಿಗಳ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಕಡ್ಡಾಯ ಎಂದು ಹೇಳಲಾಗಿತ್ತು. ಆದರೆ ಈಗ ಕಡ್ಡಾಯವಲ್ಲ ಎಂದು ಸರ್ಕಾರ ತಿಳಿಸಿದೆ.
* ನೀವು ಅರ್ಜಿ ಸಲ್ಲಿಸಿದ ಬಳಿಕ ಅರ್ಜಿ ಅನುಮೋದನೆಯಾಗಿ ನಿಮಗೆ ಆಗಸ್ಟ್‌ನಲ್ಲಿ ಹಣ ಲಭ್ಯವಾಗಬಹುದು. ಆದರೆ ಬಳಿಕ ನೀವು ಸಲ್ಲಿಸಿದ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿ ನೀವು ನಕಲಿ ದಾಖಲೆ ಸಲ್ಲಿಸಿರುವುದು ಖಚಿತವಾದರೆ, ಅಥವಾ ನೀವು ತಪ್ಪು ಮಾಹಿತಿ ನೀಡಿದ್ದರೆ, ನಿಮಗೆ ನೀಡಿದ ಹಣವನ್ನು ಹಿಂಪಡೆಯಲಾಗುತ್ತದೆ. ಹಾಗೆಯೇ ನಿಮ್ಮ ವಿರುದ್ಧ ಸೂಕ್ತವಾದ ಕ್ರಮವನ್ನು ಕೈಗೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ ನೋಡಿ
ಹಂತ 1: ಸೇವಾ ಸಿಂಧು ಪೋರ್ಟರ್ ಅಥವಾ ಆಪ್‌ಗೆ ಲಾಗಿನ್ ಆಗಿ
ಹಂತ 2: ಗೃಹಲಕ್ಷ್ಮೀ ಎಂದು ನಮೂದಿಸಲಾಗಿರುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ
ಹಂತ 3: ಗೃಹ ಲಕ್ಷ್ಮೀ ಯೋಜನೆಗೆ ಆನ್‌ಲೈನ್ ಅರ್ಜಿ ಲಭ್ಯವಾಗುತ್ತದೆ.
ಹಂತ 4: ಅರ್ಜಿಯನ್ನು ಭರ್ತಿ ಮಾಡಿ.
ಹಂತ 5: I agree ಎಂಬುವುದನ್ನು ಕ್ಲಿಕ್ ಮಾಡಿ
ಹಂತ 6: word verification ಎಂದು ಇರುವಲ್ಲಿ ಕಾಣುವ ಸಂಖ್ಯೆಗಳನ್ನು ಬಾಕ್ಸ್‌ನಲ್ಲಿ ನಮೂದಿಸಿ submit ಕ್ಲಿಕ್ ಮಾಡಿ.
ಯಾರು ಯೋಜನೆಗೆ ಅರ್ಹರಲ್ಲ
ಒಂದು ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ಸ್ ಅನ್ನು ಸಲ್ಲಿಕೆ ಮಾಡುತ್ತಿದ್ದರೆ ಈ ಯೋಜನೆಗೆ ಅರ್ಹರಾಗುವುದಿಲ್ಲ. ಇನ್ನು ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವವರು ಆಗಿದ್ದರೂ ಕೂಡಾ ಈ ಯೋಜನೆಯ ಫಲವನ್ನು ಪಡೆಯಲು ಅರ್ಹರಾಗಿರುವುದಿಲ್ಲ.