ಬೆಂಗಳೂರು:ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಕಾರಣ ಅರ್ಜಿ ಸಲ್ಲಿಕೆಯನ್ನು ನಿಲ್ಲಿಸಲಾಗಿತ್ತು, ಬಿಪಿಎಲ್‌ ಕಾರ್ಡ್‌ಗಳ ವಿತರಣೆಗೂ ಬ್ರೇಕ್‌ ಬಿದ್ದಿತ್ತು. ಆಹಾರ ಇಲಾಖೆಯ ವೆಬ್‌ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಯ ವಿಭಾಗವನ್ನು ಲಾಕ್‌ ಮಾಡಲಾಗಿತ್ತು, ಇನ್ನೊಂದು ವಾರದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು.

ಬಿಪಿಎಲ್‌ ಕಾರ್ಡ್‌ಗಾಗಿ ಈಗಾಗಲೇ 2.94 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಇವುಗಳ ಪರಿಶೀಲನೆ ಕೂಡ ಆರಂಭವಾಗಲಿದೆ. ಎರಡು ರೀತಿಯ ಬಿಪಿಎಲ್ ಕಾರ್ಡ್ ವಿತರಣೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಒಂದು ಪ್ರಕಾರದ ಬಿಪಿಎಲ್‌ ಕಾರ್ಡ್‌ನಲ್ಲಿ ಪಡಿತರ ಜೊತೆಗೆ ಸರ್ಕಾರಿ ಸೇವೆಗಳು, ಆರೋಗ್ಯ ಸೇವೆಗಳ ಪಡೆಯಲು ಮತ್ತೊಂದು ಬಗೆಯ ಬಿಪಿಎಲ್‌ ಕಾರ್ಡ್ ಹೊಂದಿದವರಿಗೆ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು, ವೈದ್ಯಕೀಯ ಚಿಕಿತ್ಸೆ ಪಡೆಯಲು ಅವಕಾಶ ಇದ್ದು, ಇದಕ್ಕೆ ಪಡಿತರ ಸಿಗುವುದಿಲ್ಲ. ಈಗಾಗಲೇ ಆಂಧ್ರಪ್ರದೇಶದಲ್ಲಿ ಈ ರೀತಿ ಮಾಡಲಾಗಿದೆ.

ಕಾರು ಇದ್ದವರಿಗೆ ಕಾರ್ಡ್ ಇಲ್ಲ

ವೈಟ್‌ ಬೋರ್ಡ್ ಕಾರು ಹೊಂದಿದ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಸಿಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದರು. ಅಲ್ಲದೆ ಇನ್ನು ಒಂದು ತಿಂಗಳ ಒಳಗಾಗಿ ಬಿಪಿಎಲ್ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದರು.

ಇನ್ನು ಬಿಪಿಎಲ್‌ ಕಾರ್ಡ್ ಪಡೆಯಲು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕಿದೆ. ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಗಣಕೀಕರಣ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ವೆಬ್‌ಸೈಟ್‌ಗೆ ತೆರಳಿ ತಾವೇ ಸ್ವತಃ ಕೂಡ ಅರ್ಜಿ ಸಲ್ಲಿಕೆ ಮಾಡಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

BPL Card: ಎರಡು ರೀತಿಯ ಬಿಪಿಎಲ್ ಕಾರ್ಡ್ ಹಂಚಿಕೆ ಮಾಡಲು ಚಿಂತನೆ: ವಿವರ ಇಲ್ಲಿದೆ

ಏನೆಲ್ಲಾ ದಾಖಲೆ ಬೇಕು?

ಬಿಪಿಎಲ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಮನೆಯ ಯಜಮಾನಿಯ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕಾಗಿದೆ. ಬಿಪಿಎಲ್‌ ಕಾರ್ಡ್‌ನಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಲು ಆಧಾರ್ ಸಂಖ್ಯೆ ಜೊತೆ ಆದಾಯ ಪ್ರಮಾಣ ಪತ್ರ ನೀಡಬೇಕಾಗುತ್ತದೆ. ಆರು ವರ್ಷದ ಒಳಗಿನ ಮಕ್ಕಳ ಹೆಸರು ಸೇರ್ಪಡೆ ಮಾಡಲು ಆಧಾರ್ ಸಂಖ್ಯೆ, ಅದಕ್ಕೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ ಮತ್ತು ಜನನ ಪತ್ರ ಕಡ್ಡಾಯವಾಗಿರುತ್ತದೆ.

ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಲು ಬೇಕಾದ ದಾಖಲೆಗಳು

ಮತದಾನ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ (ಸ್ಕ್ಯಾನ್ ಮಾಡಿದ ಪ್ರತಿ) ನಂತಹ ವಾಸಸ್ಥಳದ ಪುರಾವೆ. ವಯಸ್ಸಿನ ಪ್ರಮಾಣಪತ್ರ. ಕುಟುಂಬದ ಆದಾಯ ಪ್ರಮಾಣ ಪತ್ರ, ಅರ್ಜಿದಾರರ ಪಾಸ್‌ಪೋರ್ಟ್ ಭಾವಚಿತ್ರ, ಮೊಬೈಲ್ ಸಂಖ್ಯೆ.

ಅರ್ಜಿ ಸಲ್ಲಿಸಲು ಬೇಕಾದ ಮಾನದಂಡ

*ಅರ್ಜಿದಾದರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

*ಈಗಾಗಲೇ ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿದ ಕುಟುಂಬಗಳು ಅರ್ಹ.

*ಹೊಸದಾಗಿ ಮದುವೆಯಾದ ದಂಪತಿಗಳು.

*ದಿನಾಂಕ ಮುಗಿದ ತಾತ್ಕಾಲಿಕ ಪಡಿತರ ಚೀಟಿ ಹೊಂದಿರುವವರು.