ಗಾಂಧಿ ಭವನ ಉದ್ಘಾಟಿಸಿದ ಶಾಸಕರು.
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಗಾಂಧಿ ಭವನ ಉದ್ಘಾಟನಾ ಕಾರ್ಯಕ್ರಮ ಚಾಮರಾಜನಗರದ ಯಡಬೆಟ್ಟದಲ್ಲಿರುವ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹತ್ತಿರದಲ್ಲಿರುವ ನೂತನ ಗಾಂಧಿ ಭವನ ಉದ್ಘಾಟನೆ ಮಾಡಲಾಯಿತು ನಂತರ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿಯ ಕಾರ್ಯಕ್ರಮ ನೆರವೇರಿತು

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಶ್ರೀ ಸರ್ಪಭೂಷಣ ಸ್ವಾಮೀಜಿ ನಮಗೆ ಬ್ರಿಟಿಷರಿಂದ ನಮಗೆ ಸ್ವಾತಂತ್ರ್ಯ ತಂದುಕೊಡಲು ಬಹಳ ಶ್ರಮಜೀವಿಗಳು ನಮ್ಮ ಗಾಂಧೀಜಿಯವರು ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರು ತತ್ವ ಸಿದ್ಧಾಂತಗಳ ಬಗ್ಗೆ ಒಳ್ಳೆಯ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು ಹಾಗೂ ದೇಶಕ್ಕೆ ಕೊಡುಗೆ ಕೊಟ್ಟಂತಹ ಮಹನೀಯರ ವೇಷ ಭೂಷಣಗಳಿಂದ ಮಕ್ಕಳು ಸಿಂಗಾರಗೊಂಡು ನೆರದಿದ್ದ ಎಲ್ಲರಿಗೂ ಪ್ರೇರಣೆಯನ್ನು ತುಂಬಿದರು. ಇದೆ ವೇಳೆ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಬಹುಮಾನಗಳನ್ನು ವಿತರಿಸಲಾಯಿತು ಹಾಗೂ ಗಾಂಧಿ ಭವನದ ಗ್ರಂಥಾಲಯವನ್ನು ಎಲ್ಲಾರ ಸಮ್ಮುಖದಲ್ಲಿ ಅನಾವರಣಮಾಡಿ ವೀಕ್ಷಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಪುಟ್ಟರಂಗಶೆಟ್ಟಿ.ಎ ಆರ್ ಕೃಷ್ಣಮೂರ್ತಿ ರವರು ಜಿಲ್ಲಾಧಿಕಾರಿ ಶಿಲ್ಪಾ ನಾಗ್.ಎಡಿಸಿ ಗೀತಾಹುಡೇದ್ ಪೋಲೀಸ್ ವರಿಷ್ಠಾಧಿಕಾರಿ ಪದ್ಮಿನಿಸಾಹು. ಸಿ ಇ‌ ಒ‌ ಆನಂದ್ ಪ್ರಕಾಶ್ ಮೀನಾ ಹಾಗೂ ವಾರ್ತಾ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಯವರು, ವಿವಿಧ ಧಾರ್ಮಿಕ ಮುಖಂಡರು, ಸಾರ್ವಜನಿಕರು ಹಾಗೂ ಮಾಧ್ಯಮದವರು ಉಪಸ್ಥಿತರಿದ್ದರು.

ವರದಿ ಆರ್ ಉಮೇಶ್