ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಮೀಪ ಭೀಕರ ಅಪಘಾತದಲ್ಲಿ, ಸ್ಥಳದಲ್ಲೇ 12 ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಚಿತ್ರಾವತಿ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಈ ಅಪಘಾತವಾಗಿದ್ದು, ನಿಂತಿದ್ದ ಸಿಮೆಂಟ್ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ದಟ್ಟ ಮಂಜು ಕವಿದಿದ್ದರಿಂದ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದು, ರಸ್ತೆ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.