ದೇಮಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಜನಸಂಪರ್ಕ ಸಭೆ.
ಸಂತೇಮರಹಳ್ಳಿ ಹೋಬಳಿಯ ದೇಮಹಳ್ಳಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ನಡೆದ ಜನಸಂಪರ್ಕ ಸಭೆ ಹಾಗೂ ಸಾರ್ವಜನಿಕರ ಅಹವಾಲುಗಳ ಸ್ವೀಕಾರ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಎ ಆರ್ ಕೃಷ್ಣಮೂರ್ತಿ ರವರು ಉದ್ಘಾಟಿಸಿ ಮಾತನಾಡಿದರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಿಗೂ ಸಮರ್ಪಕವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುಂತೆ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು ಈ ಸಭೆಯಲ್ಲಿ ಸಾರ್ವಜನಿಕರಿಂದ ಹೆಚ್ಚಾಗಿ ಕಂಡು ಬಂದಿರುವ ದೂರುಗಳೆಂದರೆ ನಮಗೆ ಭಾಗ್ಯಲಕ್ಷ್ಮಿ ಯೋಜನೆಯ ಹಣ ನಮಗೆ ಇನ್ನೂ ಬಂದಿಲ್ಲ ಎಂದು ಶಾಸಕರಿಗೆ ದೂರು ನೀಡಿದರು ಇದರ ಬಗ್ಗೆ ಸಾರ್ವಜನಿಕರಿಗೆ ಸಂಕ್ಷಿಪ್ತ ಮಾಹಿತಿ ನೀಡುವಂತೆ ಸಿ ಡಿ ಪಿ ಒ ರವರಿಗೆ ಶಾಸಕರು ತಿಳಿಸಿದರು ಹಾಗೂ ವಿದ್ಯುತ್ ಸಮಸ್ಯೆ ಮೂಲಭೂತ ಸೌಕರ್ಯಗಳ ಸಮಸ್ಯೆ ಬಗ್ಗೆ ಹಲವಾರು ಮನವಿಗಳು ಜನಸಂಪರ್ಕ ಸಭೆಯಲ್ಲಿ ಕಂಡು ಬಂದವು ಇದರಲ್ಲಿ ಸ್ಥಳದಲ್ಲಿಯೇ ಬಗೆ ಹರಿಸಬಹುದಾದಂತಹ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಅಧಿಕಾರಿಗಳು ಶಾಸಕರ ಸಮ್ಮುಖದಲ್ಲಿ ಬಗೆಹರಿಸಿದರು ಇನ್ನುಳಿದ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ಮಾಡುವುದಾಗಿ ಭರವಸೆ ನೀಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಪುನೀತ್ ಬಿ ಎಸ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಉಪತಹಸೀಲ್ದಾರ್ ನಾಗಲಾಂಬಿಕಾ ಪಿ ಡಿ ಒ ನಾಗಯ್ಯ . ಕಾರ್ಯದರ್ಶಿ ಸುನೀಲ್.ಪೋಲೀಸ್ ಸಬ್ ಇನ್ಸ್ಪೆಕ್ಟರ್ ತಾಜುದ್ದೀನ್. ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಜನಪ್ರತಿನಿಧಿಗಳು ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ