ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ವಿಶೇಷ ಸಭೆ ನಡೆಯಿತು
ಯಳಂದೂರು:ಪಟ್ಟಣದ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಶೇಷ ಸಭೆಯಲ್ಲಿ ಶಾಸಕರಾದ ಎ ಆರ್ ಕೃಷ್ಣಮೂರ್ತಿ ರವರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾದ ವಿಷಯಗಳು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಮೃತ್-2.0 ಯೋಜನೆಯಡಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯವರಿಗೆ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಲು ಪಟ್ಟಣದ ಬಳೇಪೇಟೆ ಆಶ್ರಯ ಬಡಾವಣೆಯಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿ ಉಳಿದಿರುವ ನಿವೇಶನವು ವೈಕೆ ಮೋಳೆಗೆ ಹೋಗುವ ರಸ್ತೆಯ ಪಕ್ಕದಲ್ಲಿದ್ದು 60+65/2,ಉದ್ದದ50+40/2 ಉಳಿದಿರುವ ನಿವೇಶನವನ್ನು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯವರಿಗೆ ಹಸ್ತಾಂತರ ಮಾಡಲು ಈ ಸಭೆಯಲ್ಲಿ ಎಲ್ಲಾರ ಸಮ್ಮುಖದಲ್ಲಿ ಒಪ್ಪಿಗೆ ಸೂಚಿಸಿದರು.
ನಂತರ ಪಟ್ಟಣದ 1ನೇ ಆಶ್ರಯ ಬಡಾವಣೆಯ ಸರ್ವೇ ನಂಬರ್ 612.613.614.615ರಲ್ಲಿ ಒಟ್ಟು 8ಎಕರೆ.10ಗುಂಟೆ ಜಾಗದಲ್ಲಿ ಪತ್ರಕರ್ತರ ಭವನ ಹಾಗೂ ಶಿಕ್ಷಕರ ಭವನ ನಿರ್ಮಾಣ ಮಾಡಲು ಚರ್ಚೆ ಮಾಡಲಾಯಿತು ನಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣ ನಿರ್ಮಿಸಲು ನಿವೇಶನ ನೀಡಲು ಮುಂದಿನ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು ಈ ಎಲ್ಲಾ ವಿಷಯಗಳನ್ನು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಈ ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸಿಲ್ದಾರ್ ಜಯಪ್ರಕಾಶ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್ ಕುಮಾರ್ ಸದಸ್ಯರಾದ ಮಹೇಶ್.ರಂಗನಾಥ್.ಮಹದೇವನಾಯ್ಕ.ಮಂಜು.ಪದ್ಮವತಿ.ಶಾಂತಮ್ಮ.ಕೆ ಮಲ್ಲಯ್ಯ.ರವಿ.ಇಂಜಿನಿಯರ್ ವೈ ಎಂ ನಾಗೇಂದ್ರ ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗದವರು ಬಸವಣ್ಣ.ವಿಜಯಲಕ್ಷಿ . ಪರಮೇಶ್ವರ. ಲಕ್ಷ್ಮಿ ಹಾಗೂ ಇತರೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ