ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು ಹಲವಾರು ಕಡೆ ಅಧಿಕಾರಿಗಳು ಹಾಗು ಸಾರ್ವಜನಿಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಸದಸ್ಯರು ದೊಡ್ಡಬಳ್ಳಾಪುರ ಉಪ ವಿಬಾಗದ ಡಿ ವೈ ಎಸ್ ಪಿ ರವಿ ರವರಿಗೆ ಮನವಿ ಸಲ್ಲಿಸಲಾಯಿತು ಮನವಿ ನೀಡಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರದಾನ ಕಾರ್ಯದರ್ಶಿ ಆರ್ ರಮೇಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಲವಾರು ನಕಲಿ ಪತ್ರಕರ್ತರು ಸೃಷ್ಟಿಯಾಗಿದ್ದು ಆರ್ ಎನ್ ಐ ನೊಂದಣಿ ಇಲ್ಲದೆ ಪತ್ರಕರ್ತ ಎಂದು ಗುರುತಿಸಿ ಕೊಳ್ಳುವ ಯಾವುದೇ ದಾಖಲೆಗಳು ಇಲ್ಲದೆ ತಮ್ಮ ವಾಹನಗಳ ಮೇಲೆ ಪ್ರೆಸ್ ಎಂದು ಹಾಕಿಕೊಂಡು ತಿರುಗುತ್ತಿದ್ದಾರೆ ಮತ್ತು ಹಲವಾರು ಮಂದಿ ನಕಲಿ ಪತ್ರಕರ್ತರು ಅಧಿಕಾರಿಗಳು/ಮತ್ತು ಸಾರ್ವಜನಿಕ ರಿಂದ ಹಣ ವಸೂಲಿ ಮಾಡುತ್ತಿರುವುದು ಸಂಘದ ಗಮನಕ್ಕೆ ಬಂದಿದ್ದು ಇಂತಹ ಪತ್ರಕರ್ತರ ವಿರುದ್ದ ಮುಲಾಜಿಲ್ಲದೆ ಕ್ರಮ ಜರುಗಿಸಲು ಮನವಿ ಮಾಡಿದರು.
ನಿಯೋಗದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಪ್ರದಾನ ಕಾರ್ಯದರ್ಶಿ ಆರ್ ರಮೇಶ್ ಜಿಲ್ಲಾ ನಿರ್ದೆಶಕ ಆರ್ ಸತೀಶ್ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ವಿ.ಪುರುಷೋತ್ತಮ ನಿರ್ದೇಶಕ ಡಿ ಚಂದ್ರಶೇಖರ್ ಉಪ್ಪಾರ್ ವಿ ಪುರುಷೋತ್ತಮ ಗೌಡ ಕೊತ್ತೂರಪ್ಪ ದೊಡ್ಡಬಳ್ಳಾಪುರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಎನ್ ಎಂ ನಟರಾಜು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಇದ್ದರು.