ಯಳಂದೂರು:ತಾಲ್ಲೂಕಿನ
ಗೌಡಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಸಭೆ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಗಾಯಿತ್ರಿ ಮಾತನಾಡಿ ನಮ್ಮ ಗ್ರಾಮ ಪಂಚಾಯಿತಿಯಲ್ಲಿ 2022/23ನೇ ಸಾಲಿನಲ್ಲಿ ನಡೆದಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ ನಡೆಸಿ ಮುಂದಿನ ಸಾಲಿನಲ್ಲಿ ನಡೆಯಬೇಕಾದ ಕಾಮಗಾರಿಗಳ ಬಗ್ಗೆ ಸಾರ್ವಜನಿಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು ಹಾಗೂ 2024/25 ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ಪಟ್ಟಿ ತಯಾರಿಸಿ ಮುಂದಿನ ಕಾಮಗಾರಿಗಳನ್ನು ನಡೆಸಲು ತಿಳಿಸಿದರು ನಂತರ ಮಾತನಾಡಿದ ನೋಡಲ್ ಅಧಿಕಾರಿಗಳಾದ ಸಹಾಯಕ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಅಧಿಕಾರಿಗಳಾದ ಶ್ರೀನಿವಾಸ ಮಾತನಾಡಿ ನಿಮ್ಮ ಗೌಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಿಗೂ ಶುದ್ದ ಕುಡಿಯುವ ನೀರಿನ ವ್ಯವಸ್ಥೆಯನ್ನು ನಮ್ಮ ಇಲಾಖೆಯಿಂದ ಮಾಡಲಾಗಿದೆ ಇದರ ಉಪಯೋಗವನ್ನು ಎಲ್ಲರೂ ಪಡೆದುಕೊಳ್ಳಲು ತಿಳಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಭಾಗ್ಯ.ಸದಸ್ಯರಾದ ಚಿನ್ನಸ್ವಾಮಿ.ಚಂದ್ರುಶೇಖರ್.ಸುಂದರ್.ಮಲ್ಲು.ರಾಜೇಶ್ವರಿ. ಉಮಾ ಹಾಗೂ ವೈದ್ಯಾಧಿಕಾರಿಗಳಾದ ಡಾ ತನುಜಾ.ಪಶುವೈದ್ಯ ಬಸವರಾಜು ಇಂಜಿನಿಯರ್ ಅನುಶ್ರೀ ಪಿಡಿಓ ರಮೇಶ್ ಲೆಕ್ಕಪರಿಶೋಧಕ ನಾಗೇಶ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ