ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಬಿ.ಆರ್.‌ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಚಾಮರಾಜನಗರ ಪ್ರವಾಸಿ ಮಂದಿರದಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಹಾಗೂ ರಾಷ್ಟ್ರನಾಯಕ ಬಾಬಾ ಸಾಹೇಬ್ ಡಾ. ಬಿ.ಆರ್.‌ ಅಂಬೇಡ್ಕರ್ ಅವರ ಭಾವಚಿತ್ರವನ್ನು ನಗರದ ಪ್ರಮುಖ ಬೀದಿಗಳಲ್ಲಿ ನಾದ ಸ್ವರ, ಡೊಳ್ಳು ಕುಣಿತ, ಗೊರವರ ಕುಣಿತ, ವೀರಗಾಸೆ ಕುಣಿತ ಹಾಗೂ ವಿವಿಧ ಜನಪದ ಕಲಾತಂಡದೊಂದಿಗೆ ಮೆರವಣಿಗೆಯನ್ನು ಮಾಡಲಾಯಿತು.
ನಂತರ ನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಿ ಭಾರತ ರತ್ನ ಸಂವಿಧಾನ ಶಿಲ್ಪಿ ಹಾಗೂ ರಾಷ್ಟ್ರನಾಯಕ ಬಾಬಾ ಸಾಹೇಬ್ ಡಾ. ಬಿ.ಆರ್.‌ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾನ್ಯ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ವೆಂಕಟೇಶ್ ರವರು ಹಾಗೂ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರೊಂದಿಗೆ ಪುಷ್ಪಾರ್ಚನೆಯನ್ನು ಸಲ್ಲಿಸಲಾಯಿತು.‌ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ನಳಂದ ಬುದ್ಧ ವಿಹಾರದ ಬೋಧಿರತ್ನ ಬಂತೇಜಿ ದಿವ್ಯ ಸಾನಿಧ್ಯ ವಹಿಸಿದರು, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರು, ಸಿ ಪುಟ್ಟರಂಗಶೆಟ್ಟಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕರು ಎ ಆರ್ ಕೃಷ್ಣಮೂರ್ತಿ ವಿಧಾನ ಪರಿಷತ್‌ ಸದಸ್ಯರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓ, ನಿರ್ದೇಶಕರು ಬಿ.ಆರ್.ಟಿ, ಸಮುದಾಯದ ಮುಖಂಡರು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು


ವರದಿ ಆರ್ ಉಮೇಶ್ ಚಾಮರಾಜನಗರ