ಯಳಂದೂರು:ತಾಲ್ಲೂಕಿನ
ಹೊನ್ನೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಸಭೆ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನೆ ಹಾಗೂ ಗ್ರಾಮ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಶಂಕರ್ ರೂಪೇಶ್ ಮಾತನಾಡಿ ನಮ್ಮ ಗ್ರಾಮ ಪಂಚಾಯಿತಿಯಲ್ಲಿ 2022/23ನೇ ಸಾಲಿನಲ್ಲಿ ನಡೆದಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ ನಡೆಯಿತು ಮುಂದಿನ ಸಾಲಿನಲ್ಲಿ ನಡೆಯಬೇಕಾದ ಕಾಮಗಾರಿಗಳ ಬಗ್ಗೆ ಸಾರ್ವಜನಿಕರು ಹಾಗೂ ಸದಸ್ಯರುಗಳ ಜೊತೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು ಹಾಗೂ 2024/25 ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆಯ ಅಂದಾಜು ಪಟ್ಟಿ ತಯಾರಿಸಿ ಮುಂದಿನ ಕಾಮಗಾರಿಗಳನ್ನು ನೆಡೆಸಲಾಗುವುದು ಎಂದು ತಿಳಿಸಿದರು ನಂತರ ಮಾತನಾಡಿದ ನೋಡಲ್ ಅಧಿಕಾರಿಗಳಾದ ಬಿ‌ಸಿ‌ಎಂ‌ ತಾಲ್ಲೂಕು ಅಧಿಕಾರಿ ಮಲ್ಲಿಕಾರ್ಜುನ ಮಾತನಾಡಿ ಹೊನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಿಗೂ ಶುದ್ದ ಕುಡಿಯುವ ನೀರು ವಿದ್ಯುತ್ ಹಾಗೂ ಚರಂಡಿಗಳ ಸ್ವಚ್ಚತೆಯನ್ನು ಕಾಪಾಡಿಕೊಳ್ಳಲು ಎಲ್ಲಾ ಸಾರ್ವಜನಿಕರಿಗೆ ಹಾಗೂ ಗ್ರಾಮವನ್ನು ಅಭಿವೃದ್ಧಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಎಚ್ ಜಿ ನಾಗರಾಜ್ .ಸದಸ್ಯರಾದ ಪುಟ್ಟಬಸವಯ್ಯ. ಟಿ ಎನ್ ರಾಧ.ನೇತ್ರಾ.ಇಂದಿರಾ.ಭಾಗ್ಯಮ್ಮ.ಕುಮಾರ್.
ಪಿ‌‌ಡಿಓ‌ ನಿರಂಜನ್ ಕಾರ್ಯದರ್ಶಿ ಲಕ್ಷ್ಮಿ. ಮಹದೇವಮ್ಮ . ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಾದ ಸಿ.ಡಿ.ಪಿ.ಓ‌
ತೋಟಗಾರಿಕೆ ಇಲಾಖೆ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮದ ಮುಖಂಡರಾದ ಮಹದೇವಸ್ವಾಮಿ.ಸಿದ್ದರಾಜು.ಡಿ. ಸಾರ್ವಜನಿಕರು ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಈ ಗ್ರಾಮ ಸಭೆಯಲ್ಲಿ ಹಾಜರಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ