ಯಳಂದೂರು: ತಾಲ್ಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮೀನಾ ಗೋವಿಂದರಾಜು ಮಾತನಾಡಿ ನಮ್ಮ ಗ್ರಾಮ ಪಂಚಾಯಿತಿಯಲ್ಲಿ 2022/23ನೇ ಸಾಲಿನಲ್ಲಿ ನಡೆದಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ ನಡೆಸಲಾಯಿತು ಮುಂದಿನ ಸಾಲಿನಲ್ಲಿ ನಡೆಯಬೇಕಾದ ಕಾಮಗಾರಿಗಳ ಬಗ್ಗೆ ಸಾರ್ವಜನಿಕರು ಹಾಗೂ ಸದಸ್ಯರುಗಳ ಜೊತೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು ಹಾಗೂ 2024/25 ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ಪಟ್ಟಿ ತಯಾರಿಸಿ ಮುಂದಿನ ಕಾಮಗಾರಿಗಳನ್ನು ನೆಡೆಸಲಾಗುವುದು ಎಂದು ತಿಳಿಸಿದರು ನಂತರ ಮಾತನಾಡಿದ ನೋಡಲ್ ಅಧಿಕಾರಿಗಳಾದ ಶಿಕ್ಷಣ ಇಲಾಖೆ ಸಿಇಓ ಶಿವಲಂಕಾರ್ ಮಾತನಾಡಿ ಗುಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಸಾರ್ವಜನಿಕರು ನಿಮ್ಮ ಮನೆ ಜಮೀನುಗಳಲ್ಲಿ ಕೊಟ್ಟಿಗೆ ನಿರ್ಮಾಣ ಬದು ನಿರ್ಮಾಣ ಕೃಷಿ ಹೊಂಡ ಇನ್ನೂ ಅನೇಕ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಹೊಂದಲು ತಿಳಿಸಿದರು ಹಾಗೆಯೇ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರು ವಿದ್ಯುತ್ ಹಾಗೂ ಚರಂಡಿಗಳ ಸ್ವಚ್ಚತೆಯನ್ನು ಕಾಪಾಡಿಕೊಳ್ಳಲು ಎಲ್ಲಾ ಸಾರ್ವಜನಿಕರಿಗೆ ಹಾಗೂ ಗ್ರಾಮವನ್ನು ಅಭಿವೃದ್ಧಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀನಿವಾಸ್ .ಸದಸ್ಯರಾದ ಶಿವಮ್ಮ.ಮಂಜುಳಾ. ರಾಜೇಂದ್ರ. ಮಮತಾ.ನಂಜನಾಯ್ಕ. ಮಾದೇಶ್ ವಿ.ಜ್ಯೋತಿ ಸೋಮಣ್ಣ.ಶಕುಂತಲಾ. ಶೋಭಾ. ರಾಚಶೆಟ್ಟಿ. ನಟರಾಜು ಜೆ. ಕೆಎಸ್ ಚಂದ್ರಶೇಖರ್. ನಾಗುರಾಚಪ್ಪ.ಭಾಗ್ಯ. ಎನ್ ನಾಗರತ್ನ.ಶಾಂತಮ್ಮ.ಪುಟ್ಟ ಮಾದೇವಿ. ಕೆ ಮಾದೇಶ್.
ಪಿಡಿಓ ಮಂಜುನಾಥ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಾದ
ತೋಟಗಾರಿಕೆ ಇಲಾಖೆ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮದ ಸಾರ್ವಜನಿಕರು ಈ ಸಭೆಯಲ್ಲಿ ಹಾಜರಿದ್ದರು.
ವರದಿ ಆರ್ ಉಮೇಶ್