ಬದನಗುಪ್ಪೆ – ಕೆಲ್ಲಂಬಳ್ಳಿ ಕೈಗಾರಿಕ ಪ್ರದೇಶದಲ್ಲಿ ಸಭೆ ನಡೆಯಿತು
ಚಾಮರಾಜನಗರ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ನೀರು, ವಿದ್ಯುತ್, ರಸ್ತೆ, ಬಸ್ಸಿನ ವ್ಯವಸ್ಥೆ ಹಾಗೂ ಲ್ಯಾಂಡ್ ಲೇಟಿಗೇಷನ್ ಬಗ್ಗೆ ಇರುವ ಕುಂದುಕೊರತೆಗಳ ಬಗ್ಗೆ ಕೂಲಂಕುಷವಾಗಿ ಸಭೆ ನಡೆಸಿ ಚರ್ಚಿಸಲಾಯಿತು.
ಇದೇ ಸಂಧರ್ಭದಲ್ಲಿ ಅಸೋಸಿಯೇಷನ್ ಹಾಗೂ ಅಧಿಕಾರಿಗಳಿಂದ ಹಲವು ಅಭಿಪ್ರಾಯವನ್ನು ಸ್ವೀಕರಿಸಲಾಯಿತು.
ಅಧಿಕಾರಿಗಳೊಂದಿಗೆ ಸೂಕ್ತ ಮಾಹಿತಿಯನ್ನು ಸಂಗ್ರಹಿಸಿ ಮುಂದೆ ೧೫ ದಿನಗಳಲ್ಲಿ ನಡೆಯುವ ಸಭೆಯಲ್ಲಿ ಈ ಕುಂದುಕೊರತೆಗಳು ಮತ್ತೆ ಉದ್ಭವಿಸದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕೈಗಾರಿಕಾ ಅಸೋಸಿಯೇಷನ್ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಆರ್ ಉಮೇಶ್ ಚಾಮರಾಜನಗರ