ಚುನಾವಣಾ ಶಾಖೆಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ.
ದೊಡ್ಡಬಳ್ಳಾಪುರ:ಸ್ವಯಂಪ್ರೇರಿತವಾಗಿ ಮತದಾನ ಮಾಡುವ ಮೂಲಕ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಿ, ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಹಾಗು
18 ವರ್ಷದಿಂದ ತುಂಬಿದ ಪ್ರತಿಯೊಬ್ಬರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಸುಭದ್ರ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಉಪವಿಭಾಗಧಿಕಾರಿ
ಶ್ರೀನಿವಾಸ್ ತಿಳಿಸಿದರು.
ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಮತ್ತು ಚುನಾವಣಾ ಶಾಖೆಯಿಂದ ಗುರುವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಅವರು ಮಾತನಾಡಿ.ಮತದಾನ ಪ್ರಕ್ರಿಯೆ ಕಡ್ಡಾಯವಾಗಿದೆ.ಸ್ವಯಂ ಪ್ರೇರಿತವಾಗಿ ಮತದಾನ ಮಾಡುವ ಮೂಲಕ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಿ, ಉತ್ತಮ ಸಮಾಜ ನಿರ್ಮಾಣ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತ ಮತದಾರರೇ ಮತದಾನ ಪ್ರಕ್ರಿಯೆಯಿಂದ ದೂರವಿರುವುದು ವಿಷಾಧನೀಯ ಸಂಗತಿಯಾಗಿದೆ ಎಂದು ಹೇಳಿದರು.
ಯುವ ಜನರು ಸಕ್ರೀಯರಾಗಿ ನಿರ್ಭೀತಿ, ನಿರಾಂತಕವಾಗಿ ಯಾವುದೇ ಆಸೆ, ಆಮೀಷಗಳಿಗೆ ಒಳಗಾಗದೆ ಮತದಾನ ಮಾಡಬೇಕು. ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಚುನಾವಣಾ ಸಾಕ್ಷರತೆ ಅಗತ್ಯವಾಗಿದ್ದು, ಯುವ ಜನರು ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಭಾರತ ಒಂದು ಬೃಹತ್ ಪ್ರಜಾಪ್ರಭುತ್ವರಾಷ್ಟ್ರವಾಗಿದ್ದು, ದೇಶದಲ್ಲಿ ಅಧಿಕ ಯುವಕ,ಯುವತಿಯರಿಂದ ಯುವ ರಾಷ್ಟ್ರವೆಂದು ಪ್ರಸಿದ್ಧಿ ಪಡೆದುಕೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ. ಇದನ್ನರಿತು ಪ್ರತಿಯೊಬ್ಬರು ಮತದಾನದ ಪ್ರಕ್ರಿಯೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಕೇಂದ್ರ ಚುನಾವಣಾ ಆಯೋಗ ಇತ್ತೀಚಿನ ದಿನ ಗಳಲ್ಲಿ ಸಾಕಷ್ಟು ಸುಧಾರಣೆಗಳನ್ನು ಕೈಗೊಂಡಿದ್ದು, ಇದರಿಂದ ಮತದಾನ ಪ್ರಕ್ರಿಯೆ ಸುಲಲಿತವಾಗಿ ನಡೆದು, ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋ ಸ್ಕರ ರಚಿತವಾಗಿರುವ ಪ್ರಜಾಪ್ರಭುತ್ವದ ಮೌಲ್ಯ ಗಳನ್ನು ಎತ್ತಿಹಿಡಿಯುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವ ದೃಢ ನಿರ್ಧಾರವನ್ನು ಕೈಗೊಳ್ಳಬೇಕು ಎಂದರು.
ಈ ವೇಳೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿದ್ಯಾವಿಭಾ ರಾಥೋಡ್,ಇಒ ಎನ್ ಮುನಿರಾಜು, ನಗರಸಭೆ ಪೌರಾಯುಕ್ತ ಪರಮೇಶ್ ವಕೀಲರ ಸಂಘದ ಅಧ್ಯಕ್ಷ ರವಿಮಾವಿಕುಂಟೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.