ಯರಿಯೂರು ಗ್ರಾಮ ಪಂಚಾಯಿತಿಯಲ್ಲಿ ಅದ್ದೂರಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥಾ

ಯರಿಯೂರು ಗ್ರಾಮ ಪಂಚಾಯತಿಯಲ್ಲೂ ಸಂವಿಧಾನ ಜಾಗೃತಿ ಜಾಥಾಗೆ ಸಂಭ್ರಮದ ಸ್ವಾಗತ ದೊರೆಯಿತು. ಸತ್ತಿಗೆ ಸೂರಪನಿ, ಡೊಳ್ಳು, ತಮಟೆ, ಅಲಂಕೃತ ಎತ್ತಿನಗಾಡಿಗಳು ಮೆರವಣಿಗೆಯಲ್ಲಿ ಸಾಗಿದವು. ಹೆಣ್ಣು ಮಕ್ಕಳು ಕಳಶ ಹಿಡಿದು ಪಾಲ್ಗೊಂಡರು.

ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದೊಡ್ಡಮ್ಮ ನಂಜುಂಡಸ್ವಾಮಿ ವಹಿಸಿದ್ದರು. ಉಪಾಧ್ಯಕ್ಷರಾದ ಮಹೇಶ್, ಇತರೆ ಸದಸ್ಯರು, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಯೋಗೇಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್, ಇತರೆ ಅಧಿಕಾರಿಗಳು, ಗ್ರಾಮದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕರಿಗಳು, ಮುಖಂಡರು, ಉಪಸ್ಥಿತರಿದ್ದರು. ಉಪನ್ಯಾಸಕಾರದ ಶ್ರೀಕಾಂತ್ ಅವರು ಸಂವಿಧಾನ ಕುರಿತು ಮುಖ್ಯ ಭಾಷಣ ಮಾಡಿದರು.
ಡಾಕ್ಟರ್ ಅಂಬೇಡ್ಕರ್ ರವರು ನಮ್ಮ ದೇಶದ ಜನರು ರಾಜಕೀಯ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯನ್ನು ಕಾಣಬೇಕು ಎಂದು ಅಂಬೇಡ್ಕರ್ ರವರು ನಮ್ಮ ಸಂವಿಧಾನದಲ್ಲಿ ಬರವಣಿಗೆ ಮೂಲಕ ತಿಳಿಸಿದ್ದಾರೆ ನಮ್ಮ ಸಂವಿಧಾನ ವಿಶ್ವದಲ್ಲೇ ಬೃಹತ್ ದೊಡ್ಡ ಸಂವಿಧಾನ ನಮ್ಮದಾಗಿದೆ ಎಂದು ತಿಳಿಸಿದರು
ಪುಸ್ತಕ ಜೋಳಿಗೆಗೆ ಊರಿನ ಗ್ರಾಮಸ್ಥರು ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಸಂವಿಧಾನ ಕುರಿತು ನಡೆಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ವರದಿ ಆರ್ ಉಮೇಶ್ ಮಲಾರಪಾಳ್ಯ