ಬೆಂ.ಗ್ರಾ.ಜಿಲ್ಲೆಯ ಎರಡು ಪ್ರಾಧಿಕಾರಗಳಿಗೆ ಅಧ್ಯಕ್ಷ ಹಾಗೂ ಸದಸ್ಯರ ನೇಮಕ
ಬೆಂಗಳೂರು : ವಿವಿಧ ಯೋಜನಾ ಪ್ರಾಧಿಕಾರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎರಡು ಯೋಜನಾ ಪ್ರಾಧಿಕಾರಗಳಿಗೆ ಅದ್ಯಕ್ಷರು ಹಾಗೂ ಸದಸ್ಯರ ನೇಮಕ ಮಾಡಲಾಗಿದೆ.
ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಧುರೆ ಹೋಬಳಿಯ ಪ್ರಭಾವಿ ನಾಯಕ ವಿ.ಚುಂಚೇಗೌಡ ಅವರನ್ನು ನೇಮಕ ಮಾಡಲಾಗಿದೆ. ಸದಸ್ಯರನ್ನಾಗಿ ರಾಮಕೃಷ್ಣಯ್ಯ.ಎಂ, ವೆಂಕಟೇಶ್, ಅಂಜನ್ ಮೂರ್ತಿ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಅದೇ ರೀತಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷರಾಗಿ ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿ.ಶಾಂತಕುಮಾರ್ ಅವರನ್ನ ನೇಮಕ ಮಾಡಲಾಗಿದೆ. ಸದಸ್ಯರಾಗಿ
ವಿ.ಮಂಜುನಾಥ್, ರಾಮಚಂದ್ರಪ್ಪ .ಸಿ ಪ್ರಸನ್ನಕುಮಾರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ.