ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ .ಜಿ. ಚುಂಚೆಗೌಡ.

ದೊಡ್ಡಬಳ್ಳಾಪುರ:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಹಲವು ಯೋಜನೆಗಳ ಮೂಲಕ
ನಮ್ಮ ದೊಡ್ಡಬಳ್ಳಾಪುರ ನಗರದ ಅಭಿವೃದ್ಧಿಗೆ ಶ್ರಮಿಸಲಾಗುವುದು.ಮಾಜಿ ಶಾಸಕರಾದ ವೆಂಕಟರಮಣಯ್ಯ ಸೇರಿದಂತೆ ಹಲವು ಹಿರಿಯರ ಮಾರ್ಗದರ್ಶನದೊಂದಿಗೆ ಸರ್ವ ಸದಸ್ಯರ ಸಲಹೆಯೊಂದಿಗೆ ಉತ್ತಮ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ನೂತನ ಯೋಜನಾ ಪ್ರಾಧಿಕಾರದ ಅದ್ಯಕ್ಷ ವಿ.ಚುಂಚೆಗೌಡ ತಿಳಿಸಿದರು.

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೊಷ್ಟಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ನಮ್ಮ ರಾಜ್ಯದ ನಾಯಕರು ಹಾಗೂ ತಾಲ್ಲೂಕಿನ ಮಾಜಿ ಶಾಸಕರ ಸತತ ಪ್ರಯತ್ನದಿಂದಾಗಿ ಹಾಗೂ ನಮ್ಮ ನಗರಕ್ಕೆ ಯೋಜನಾ ಪ್ರಾಧಿಕಾರದ ಅವಶ್ಯಕತೆ ಇದ್ದ ಕಾರಣ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ರಚನೆಯಾಯಿತು.ಈ ಯೋಜನಾ ಪ್ರಾಧಿಕಾರವು ಮುಂದೆ ಮತ್ತಷ್ಟು ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಲು ಸಿದ್ದವಿದೆ ಎಂದರು

ದೊಡ್ಡಬಳ್ಳಾಪುರ ಯೋಜನಾ
ಪ್ರಾಧಿಕಾರದ ಅಸ್ತಿತ್ವದಿಂದ ಬಹಳ ಮುಖ್ಯವಾಗಿ ಕೆರೆಗಳ ಅಭಿವೃದ್ಧಿ ಮಾಡಲಾಗುವುದು ತಾಲ್ಲೂಕಿನ ಸರ್ವಂಗಿಣ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಹಿಂದಿನ ಸಾಲಿನಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ, ಪ್ರಸ್ತುತ ಇರುವ ಶಾಸಕರು ಅನುದಾನ ಪಡೆದು ಅಭಿವೃದ್ಧಿ ಮಾಡಬೇಕಿದೆ. ನಮ್ಮ
ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಹಲವರಿಗೆ ನಮ್ಮ ಯೋಜನೆಗಳಿಂದ ಬಡಜನರು, ಕೂಲಿಕಾರ್ಮಿಕರು ಹಾಗೂ ರೈತರಿಗೆ ಬಹಳ ಉಪಯುಕ್ತವಾಗಿದೆ ಎಂಬುದರ ಅರಿವಾಗಬೇಕಿದೆ.
ಈ ಹಿಂದೆ ಅಧಿಕಾರದಲ್ಲಿದ ಬಿಜೆಪಿ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕ್ರಿಯಾಶೀಲತೆಗೆ ಉತ್ತಮ ಉದಾಹರಣೆ ಎಂದರು.

ಈ ಕಾರ್ಯಕ್ರಮದಲ್ಲಿ ಪ್ರಾಧಿಕಾರದ ನೂತನ ಸದಸ್ಯರುಗಳಾದ ರಾಮಕೃಷ್ಣಯ್ಯ.ಟಿ, ಅಂಜನಮೂರ್ತಿ, ಅಪ್ಪಿ ವೆಂಕಟೇಶ್ ಸೇರಿದಂತೆ ತಾಲೂಕಿನ ಮುಖಂಡರು ನಗರಸಭಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.