ಗೀತಂ ವಿವಿಯಲ್ಲಿ ಬಿ.ಟೆಕ್ ವಿದ್ಯಾರ್ಥಿ ಸಾವು, ಆತ್ಮಹತ್ಯೆ ಶಂಕೆ, ಮುಂದುವರಿದ ಪೊಲೀಸರ ವಿಚಾರಣೆ..?

ದೊಡ್ಡಬಳ್ಳಾಪುರ : ಗೀತಂ ವಿಶ್ವವಿದ್ಯಾಲಯದಲ್ಲಿ ಕಳೆದ ರಾತ್ರಿ ಬಿ.ಟೆಕ್ ವಿದ್ಯಾರ್ಥಿ ಸಾವನ್ನಪ್ಪಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ವ್ಯಕ್ತವಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ಕಳೆದ ರಾತ್ರಿ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮೃತ ವಿದ್ಯಾರ್ಥಿ ಆಂಧ್ರ ಮೂಲದ ವಿದ್ಯಾರ್ಥಿ ದಾಸರಿ ಬ್ರಹ್ಮಾ ಸಾಯಿ ರೆಡ್ಡಿ(20) ಎಂದು ತಿಳಿದು ಬಂದಿದೆ, ಗೀತಮ್ ಕಾಲೇಜಿನಲ್ಲಿ ಮೊದಲ ವರ್ಷದ ಬಿ.ಟೆಕ್ ಪದವಿಯನ್ನು ಓದುತ್ತಿದ್ದ, ರಾತ್ರಿ ಊಟದ ನಂತರ ಹಾಸ್ಟೇಲ್ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಸಂಶಯ ವ್ಯಕ್ತವಾಗಿದೆ.

ಕಾಲೇಜು ವಿದ್ಯಾರ್ಥಿಗಳ ಮೊಬೈಲ್ ನಲ್ಲಿ ವಿದ್ಯಾರ್ಥಿ ದಾಸರಿ ಬ್ರಹ್ಮಾ ಸಾಯಿ ರೆಡ್ಡಿಯ ಮೃತ ದೇಹವನ್ನು ಕೊಂಡೊಯ್ಯುತ್ತಿರುವ ದೃಶ್ಯಾವಳಿಗಳು ಸೆರೆಯಾಗಿದ್ದು. ಯಾವ ಕಾರಣದಿಂದಾಗಿ ವಿದ್ಯಾರ್ಥಿ ಮೃತ ಪಟ್ಟಿದ್ದಾನೆ ಎಂಬುದು ಇಲ್ಲಿಯವರೆಗೂ ತಿಳಿದು ಬಂದಿಲ್ಲ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ವಿಚಾರಣೆಯನ್ನ ಮುಂದುವರೆಸಿದ್ದು, ವಿದ್ಯಾರ್ಥಿ ಸಾವಿನ ನಿಖರ ಕಾರಣ ತಿಳಿದು ಬರ ಬೇಕಿದೆ.