ಮಾರ್ಚ್ 19ರಂದು ನಡೆಯಲಿದೆ ಇತಿಹಾಸ ಪ್ರಸಿದ್ಧ ಮದುರೆ ಶನಿಮಹಾತ್ಮ ಸ್ವಾಮಿಯ 69ನೇ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ:ತಾಲ್ಲೂಕಿನ ಚಿಕ್ಕಮಧುರೆಯ ಶ್ರೀ ಶನಿಮಹಾತ್ಮ ಸ್ವಾಮಿ ಅನ್ನ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು ಇತಿಹಾಸ ಪ್ರಸಿದ್ಧ ಬ್ರಹ್ಮರಥೋತ್ಸವ ಕಾರ್ಯಕ್ಕೆ ಸಕಲ ಸಿದ್ಧತೆಗಳು ನೆಡೆದಿದ್ದು. 69ನೇ ಬ್ರಹ್ಮ ರಥೋತ್ಸರ್ವ ಕಾರ್ಯಕ್ರಮವು ಮಾರ್ಚ್ 19ರಂದು ಮಧ್ಯಾಹ್ನ 01-10 ರಿಂದ 01-55ರ ವರೆಗೆ ಸಲ್ಲುವ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ನೆಡೆಯಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ವಿವಿಧ ದಿನಗಳ ವಿಶೇಷ ಕಾರ್ಯಕ್ರಮಗಳು ಹಾಗೂ ಉತ್ಸವಗಳ ವಿವರಗಳನ್ನು ಒಳಗೊಂಡ ಬ್ರಹ್ಮ ರಥೋತ್ಸವದ ಆಹ್ವಾನ ಪತ್ರಿಕೆಯನ್ನು ಅನಾವರಣಗೊಳಿಸಲಾಯಿತು.

ಈ ಬ್ರಹ್ಮರಥೋತ್ಸವದಲ್ಲಿ ರಾಜ್ಯದ್ಯಂತ ಸಾವಿರಾರು ಸಂಖ್ಯೆಯಲ್ಲಿ ಭಕ್ತದಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಜಾತ್ರಮಹೋತ್ಸವಕ್ಕೆ ಬರುವ ಎಲ್ಲಾ ಭಕ್ತದಿಗಳಿಗೆ ತಿಂಡಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಬ್ರಹ್ಮರಥೋತ್ಸವದ ಅಂಗವಾಗಿ ಮಾರ್ಚ್ 18 ರಿಂದ ಮಾರ್ಚ್ 25ರ ವರೆಗೆ ವಿವಿಧ ಪೌರಾಣಿಕ ನಾಟ ಉತ್ಸವ, ಕೀಲು ಕುದುರೆ, ಸಂಗೀತ ಸಂಜೆ, ಕರ ಕುಣಿತ, ಗಿಚ್ಚಿ ಗಿಲಿಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನೆಡೆಯಲಿವೆ. ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದೇವಾಲಯದ ಧರ್ಮಾಧಿಕಾರಿಗಳಾದ ಜಿ ಸತ್ಯನಾರಾಯಣ, ಕಾರ್ಯದರ್ಶಿಗಳಾದ ಸಿ.ಡಿ.ಸತ್ಯನಾರಾಯಣಗೌಡ, ಧರ್ಮದರ್ಶಿಗಳಾದ ಆದ ಕೆ ವಿ ಪ್ರಕಾಶ್ ರವರು ದೇವಾಲಯದ ಅರ್ಚಕರು ಉಪಸ್ಥಿತರಿದ್ದರು.